ಆಟಿಯ ಆಹಾರಗಳಲ್ಲಿ ಅಡಗಿದೆ ವೈಜ್ಞಾನಿಕ ಹಿನ್ನೆಲೆ

billava
billava
Published on

ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ

ಆಟಿಯು ಕಷ್ಟದ ಕಾಲವಾಗಿತ್ತು. ಅವಿಭಕ್ತ ಕುಟುಂಬದಲ್ಲಿಯ ಒಡನಾಟದ ಜತೆಗೆ ಕೃಷಿ ಬದುಕಿನ ಅನಾವರಣದ ನೆನಪು ಅಜರಾಮರ. ಇಂದು ಆಟಿಯು ವೈಭವೀಕರಣವಾಗಿದೆ. ಹಾಳೆಯ ಮುಟ್ಟಾಲೆಯಿಂದ ಹಿಡಿದು ಬಳಸುವ ಪರಿಕರಗಳಿಗೆ ವೈಜ್ಞಾನಿಕ ಹಿನ್ನೆಲೆಯಿದೆ. ಆಟಿಯ ಆಹಾರಗಳು ದೈಹಿಕ ವ್ಯವಸ್ಥೆಗೆ ಶಕ್ತಿದಾಯಕವಾಗಿತ್ತು ಎಂದು ಜಾನಪದ ಚಿಂತಕ ವಾಮನ ಕೋಟ್ಯಾನ್ ನಡಿಕುದ್ರು ಹೇಳಿದರು.

ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ, ಶ್ರೀ ನಾರಾಯಣಗುರು ಮಹಿಳಾ ಮಂಡಳಿ ಮತ್ತು ಕಲ್ಪತರು ಮಹಿಳಾ ಸ್ವಸಹಾಯ ಗುಂಪಿನ ಆಶ್ರಯದಲ್ಲಿ ಪಡುಬಿದ್ರಿ ಬಿಲ್ಲವ ಸಂಘದ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಆಟಿದ ಲೇಸ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪಡುಬಿದ್ರಿ ಸಿ.ಎ.ಸೊಸೈಟಿ ನಿರ್ದೇಶಕ ಗಿರೀಶ್ ಪಲಿಮಾರು, ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ ಅಧ್ಯಕ್ಷ ವೈ.ಸುಧೀರ್ ಕುಮಾರ್, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ.ಸುಕುಮಾರ್, ಬಿಲ್ಲವ ಸಂಘದ ಮಹಿಳಾ ವಿಭಾಗದ ಅಧ್ಯಕ್ಷೆ ರೋಹಿಣಿ ಆನಂದ್, ನಾರಾಯಣಗುರು ಸೇವಾದಳದ ದಳಪತಿ ಸಂತೋಷ್ ನಂದಿಕೂರು, ಬಿಲ್ಲವ ಸಂಘದ ಉಪಾಧ್ಯಕ್ಷ ರವಿ ಸಾಲ್ಯಾನ್, ಕಾರ್ಯದರ್ಶಿ ಲಕ್ಷ್ಮಣ ಪೂಜಾರಿ, ಕೋಶಾಧಿಕಾರಿ ಅಶೋಕ್ ಪೂಜಾರಿ ಉಪಸ್ಥಿತರಿದ್ದರು. ಸುಚರಿತ ಎಲ್.ಅಮೀನ್ ನಿರೂಪಿಸಿದರು, ತೇಜಾವತಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net