

ಬಾದಾಮಿ: ಆಡಳಿತಾರೂಢ ಕಾಂಗ್ರೆಸ್ ಸರ್ಕಾರವು ದಿನಬಳಕೆ ವಸ್ತುಗಳ ಬೆಲೆ ಏರಿಕೆ ವಿರುದ್ಧ ಎರಡನೇ ಹಂತದ ಜನಾಕ್ರೋಶ ಯಾತ್ರೆ ಬೆಳಗಾವಿಯಲ್ಲಿ ಆರಂಭವಾಗಿದೆ ಎಂದು ಮಾಜಿ ಶಾಸಕ ಎಂ.ಕೆ.ಪಟ್ಟಣಶೆಟ್ಟಿ ಹೇಳಿದರು.
ನಗರದ ಕಾನಿಪ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಹೆಸರಿಗೆ ಐದು ಪಂಚ ಗ್ಯಾರಂಟಿಗಳನ್ನು ಕೊಟ್ಟು, ಅದರ ಹಣವನ್ನು ಬೇರೆ ಮೂಲದಿಂದ ಪಡೆಯುತ್ತಿದೆ. ಆದ್ದರಿಂದ ಸರ್ಕಾರದ ವಿರುದ್ಧ ಬಿಜೆಪಿ ಪಕ್ಷದ ವತಿಯಿಂದ ಎರಡನೆ ಹಂತದ ಜನಾಕ್ರೋಶ ಯಾತ್ರೆ ಆರಂಭವಾಗಿದೆ. ಎಲ್ಲರು ಜನಾಕ್ರೋಶ ಯಾತ್ರೆಯಲ್ಲಿ ಭಾಗವಹಿಸುವ ಮೂಲಕ ಯಾತ್ರೆ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಶಾಂತಗೌಡ ಪಾಟೀಲ ಮಾತನಾಡಿ, ಸರ್ಕಾರ ಗ್ಯಾರಂಟಿ ಯೋಜನೆಗೆ ಎಸ್‌ಸಿ, ಎಸ್‌ಟಿ ಜನಾಂಗದ ಎಸ್‌ಸಿಪಿ, ಟಿಎಸ್‌ಪಿ ಅನುದಾನ ಬಳಕೆ ಮಾಡಿದೆ. ಸರ್ಕಾರ ಎಲ್ಲ ರಂಗಗಳಲ್ಲಿ ವಿಲವಾಗಿದೆ. ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ಆರೋಪಿಸಿದರು.
ಪಿಕಾರ್ಡ ಬ್ಯಾಂಕ್ ಅಧ್ಯಕ್ಷ ಮಹಾಂತೇಶ ಮಮದಾಪೂರ, ತಾಲೂಕು ಬಿಜೆಪಿ ಪಕ್ಷದ ಅಧ್ಯಕ್ಷ ನಾಗರಾಜ ಕಾಚೆಟ್ಟಿ, ಮಾಜಿ ಜಿಪಂ ಸದಸ್ಯ ಎ್.ಆರ್.ಪಾಟೀಲ, ರಾಜ್ಯ ಸರ್ಕಾರ ಮಹಾಂಡಳದ ನಿರ್ದೇಶಕ ಹೊನ್ನಯ್ಯ ಹಿರೇಮಠ, ಮುಖಂಡರಾದ ಶಿವನಗೌಡ ಸುಂಕದ, ಮುತ್ತು ಉಳ್ಳಾಗಡ್ಡಿ, ಮಾಗುಂಡಪ್ಪ ನೋಟಗಾರ, ಶಿವನಗೌಡ ಸುಂಕದ ಮತ್ತಿತರರಿದ್ದರು.