ಪೌರ ಕಾರ್ಮಿಕರ ಸೇವೆ ಅನನ್ಯ

The service of civic workers is unique
ವಿಜಯಪುರದ ಸಮೃದ್ಧಿ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನ ಹಿನ್ನೆಲೆ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು. ಅಂಬಾದಾಸ ಜೋಶಿ, ರಮೇಶ ಬಿ.ಡಿ., ಡಾ. ಮಾಧವ ಗುಡಿ ಮತ್ತಿತರರಿದ್ದಾರೆ.
Published on

ವಿಜಯಪುರ: ಪರಿಸರ ರಕ್ಷಣೆಯಲ್ಲಿ ಪ್ರತಿಯೊಬ್ಬರೂ ಸಹ ತಮ್ಮ ಜವಾಬ್ದಾರಿಗಳನ್ನು ಅರಿತು ನಡೆದಾಗ ಮಾತ್ರ ಸ್ವಚ್ಛ, ಸುಂದರ ಪರಿಸರ ನಿರ್ಮಿಸಲು ಸಾಧ್ಯ ಎಂದು ಪರಿಸರ ಜಾಗೃತಿ ವೇದಿಕೆ ಸಂಟಕ ಅಂಬಾದಾಸ ಜೋಶಿ ಹೇಳಿದರು.

ನಗರದ ಅಥಣಿ ರಸ್ತೆಯ ಡಾ. ರಾಜಕುಮಾರ ಲೇಔಟ್​ನಲ್ಲಿರುವ ಸಮೃದ್ಧಿ ಶಿಕ್ಷಣ ಸಂಸ್ಥೆ ಮತ್ತು ಪರಿಸರ ಜಾಗೃತಿ ವೇದಿಕೆಯ ಸಹಯೋಗದಲ್ಲಿ ಗುರುವಾರ ನಡೆದ ವಿಶ್ವ ಪರಿಸರ ದಿನ ಹಿನ್ನೆಲೆ ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಪರಿಸರ ರಕ್ಷಣೆಯಲ್ಲಿ ಪ್ರತಿದಿನವೂ ಸಹ ತಮ್ಮ ಕಸಗುಡಿಸುವ ಕಾಯಕದ ಮೂಲಕ ಬಡಾವಣೆಗಳನ್ನು ಸ್ವಚ್ಛಗೊಳಿಸುವ ಪೌರ ಕಾರ್ಮಿಕರ ಸೇವೆ ಅನನ್ಯ ಎಂದರು.

ಅಧ್ಯಕ್ಷತೆ ವಹಿಸಿದ್ದ ಸಮೃದ್ಧಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ರಮೇಶ ಬಿ.ಡಿ., ಮತ್ತು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಡಾ. ಮಾಧವ ಗುಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ವಿಶ್ರಾಂತ ೇತ್ರ ಶಿಕ್ಷಣಾಧಿಕಾರಿ ವಿಠಲ ದೇವಣಗಾವಿ, ಪಾಲಿಕೆ ಆರೋಗ್ಯ ವಿಭಾಗದ ಕಿರಣ ಶಿಂಧೆ ವೇದಿಕೆಯಲ್ಲಿದ್ದರು. ಆರೋಗ್ಯ ಇಲಾಖೆ ಆಪ್ತ ಸಮಾಲೋಚಕ ರವಿ ಕಿತ್ತೂರ ಸಾಲು ಮರದ ತಿಮ್ಮಕ್ಕನ ಮಾದರಿ ವ್ಯಕ್ತಿತ್ವದ ಕುರಿತ ಪರಿಸರ ಗೀತೆ ಹಾಡಿದರು. ನಂತರ ನಡೆದ ಕಾರ್ಯಕ್ರಮದಲ್ಲಿ ನಾಲ್ಕು ಜನ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು.

ಸಂಪತ್​ ಕುಲಕರ್ಣಿ, ಆನಂದ ಕುಲಕರ್ಣಿ, ಜೈನುದ್ದೀನ ಗುಂಡಬಾವಡಿ ಮತ್ತಿತರರಿದ್ದರು.

ಉಪನ್ಯಾಸಕ ಶರಣಗೌಡ ಪಾಟೀಲ ಸ್ವಾಗತಿಸಿ ಪರಿಚಯಿಸಿದರು. ಪ್ರೊ. ಸುಭಾಸ ಕನ್ನೂರ ನಿರೂಪಿಸಿದರು. ಪ್ರವಿಣ ಪಾಂಡೆ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net