ಮೂರನೇ ದಿನಕ್ಕೆ ಕಾಲಿಟ್ಟ ಅತಿಥಿ ಉಪನ್ಯಾಸಕರ ಧರಣಿ

protest
Published on

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸಲು ಒತ್ತಾಯಿಸಿ ಕರ್ನಾಟಕ ಅತಿಥಿ ಉಪನ್ಯಾಸಕರ ಸಂಘದ ಸಾವಿರಾರು ಕಾರ್ಯಕರ್ತರು ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ 3ನೇ ದಿನಕ್ಕೆ ಕಾಲಿಟ್ಟಿದೆ.
ಪ್ರತಿಭಟನಾನಿರತರ ಪೈಕಿ 12 ಮಂದಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು. ಈ ಪೈಕಿ ಶುಕ್ರವಾರ ಹಾವೇರಿಯ ಸುರೇಶ್ ಹಾಗೂ ಹೊಸಪೇಟೆಯ ಡಾ.ಗಂಗಮ್ಮ ಅಸ್ವಸ್ಥರಾಗಿದ್ದು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು.
ಸಿಎಂ ಭೇಟಿ ಭರವಸೆ
ಶುಕ್ರವಾರ ಮಾಜಿ ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ಪ್ರತಿಭಟನಾ ನಿರತರನ್ನು ಭೇಟಿ ಮಾಡಿ ಶನಿವಾರ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿಸುವುದಾಗಿ ಭರವಸೆ ನೀಡಿದ್ದಾರೆ. ಈ ವೇಳೆ ಸರ್ಕಾರದಿಂದ ೧೨ ತಿಂಗಳ ಬಾಕಿ ಸಂಬಳ ಕೊಡಿಸುವುದು ಹಾಗೂ ಅತಿಥಿ ಉಪನ್ಯಾಸಕರನ್ನು ಕೆಲಸ ಮುಂದುವರಿಸಲಾಗುವುದು. ಖಾಯಂಗೊಳಿಸುವ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚೆ ನಡೆಸುವುದಾಗಿ ತಿಳಿಸಿದ್ದಾರೆ. ಜತೆಗೆ, ಉಪವಾಸ ಸತ್ಯಾಗ್ರಹ ಮಾಡುತ್ತಿರುವವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net