ದೇಶದಲ್ಲಿ ತುರ್ತು ಪರಿಸ್ಥಿತಿಗಿಂತ ಕೆಟ್ಟ ಸ್ಥಿತಿ ಇದೆ

Santosh Lad 1
Published on

ಧಾರವಾಡ: ದೇಶದಲ್ಲಿನ ಸಮಸ್ಯೆಗಳು ಜನರಿಗೆ ಗೊತ್ತಾಗದಿರಲಿ ಎಂಬ ಕಾರಣಕ್ಕೆ ಬಿಜೆಪಿ ತುರ್ತು ಪರಿಸ್ಥಿತಿ ಬಗ್ಗೆ ಮಾತನಾಡುತ್ತಿದೆ. ತರ್ತು ಪರಿಸ್ಥಿತಿಗೆ 50 ವರ್ಷವಾಗಿದೆ. ಆದರೆ ಪ್ರಸ್ತುತ ದೇಶದಲ್ಲಿ ತುರ್ತು ಪರಿಸ್ಥಿತಿಗಿಂತ ಕೆಟ್ಟ ಸ್ಥಿತಿ ಇದೆ ಎಂಬುದು ಅವರಿಗೆ ಅರಿವಾಗುತ್ತಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಟೀಕಿಸಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುಲ್ವಾಮಾ, ಪಹಲ್ಗಾಮ್ ಘಟನೆಗಳು ಸೇರಿದಂತೆ ದೇಶದಲ್ಲಿನ ಇತರ ವಿಷಯಗಳ ಬಗ್ಗೆ ಜನರು ಪ್ರಶ್ನೆ ಮಾಡದಿರಲಿ ಎಂಬ ಕಾರಣಕ್ಕೆ ತುರ್ತು ಪರಿಸ್ಥಿತಿ ವಿಷಯವನ್ನು ಮುನ್ನೆಲೆಗೆ ತಂದಿದ್ದಾರೆ. ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು 11 ವರ್ಷವಾದರೂ ಏನು ಸಾಧನೆ ಮಾಡಿದೆ? 50 ವರ್ಷದ ಹಿಂದಿನ ತುರ್ತು ಪರಿಸ್ಥಿತಿ ಇಂದು ಪ್ರಸ್ತುತವೇ ಎಂದು ಪ್ರಶ್ನಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net