ಭಜನೆಯಿಂದ ಆತ್ಮ ಪರಿಶುದ್ಧ: ಅನಿಲ್ ಕುಮಾರ್ ಉಪನ್ಯಾಸ

Bel_Bajane
Published on

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 26ನೇ ವರ್ಷದ ಭಜನಾ ಕಮ್ಮಟದ 4ನೇ ದಿನದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಕಾಶವಾಣಿ ಎ ಗ್ರೇಡ್ ಕಲಾವಿದ ರಾಘವೇಂದ್ರ ಆಚಾರ್ಯ ಹಾಗೂ ವಿದುಷಿ ಅನುಸೂಯ ಪಾಠಕ್ ಉಜಿರೆ ಹಾಡುಗಳನ್ನು ಕಲಿಸಿಕೊಟ್ಟರು. ಡಾ.ಡಿ.ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವೀ.ಹೆಗ್ಗಡೆಯವರು, ಶ್ರೀ ಮೋಹನದಾಸ ಸ್ವಾಮೀಜಿಯವರು ಉಪಸ್ಥಿತರಿದ್ದು ಶಿಬಿರಾರ್ಥಿಗಳಿಗೆ ಪ್ರೇರಣೆ ನೀಡಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಉಪನ್ಯಾಸ ನೀಡಿ, ಆತ್ಮಸಾಕ್ಷಿಗೆ ಸರಿಯಾಗಿ ಕೆಲಸ ಮಾಡಿದಾಗ ಎಲ್ಲವೂ ಪರಿಶುದ್ಧವಾಗಿ ಉತ್ತಮ ಪರಿಣಾಮ ಬೀರುತ್ತದೆ. ಭಗವಂತನ ಭಜನೆಯಿಂದ ನಮ್ಮ ಆತ್ಮ ಪರಿಶುದ್ಧವಾಗಿ, ನಾವು ಮಾಡುವ ಎಲ್ಲ ಕೆಲಸಗಳು ಕೂಡಾ ಪರಿಶುದ್ಧವಾಗಿರುತ್ತವೆ. ಇಂತಹ ಕಾರ್ಯಗಳಿಂದ ನಮಗೂ ಆತ್ಮತೃಪ್ತಿ ಸಿಗುತ್ತದೆ ಹಾಗೂ ಸಮಾಜಕ್ಕೂ ಒಳಿತಾಗುತ್ತದೆ ಎಂದರು.

ಧರ್ಮಸ್ಥಳದಿಂದ ಡಾ.ಹೆಗ್ಗಡೆಯವರು ಬಹುಮುಖಿ ಸಮಾಜ ಸೇವಾಕಾರ್ಯಗಳ ಮೂಲಕ ಮಾಡುತ್ತಿರುವ ವಿವಿಧ ಯೋಜನೆಗಳ ಮಾಹಿತಿಯನ್ನು ನೀಡಿದರು.

ಧರ್ಮಸ್ಥಳ ರಂಗಶಿವ ಕಲಾಬಳಗದಿಂದ ಹೇಮಾವತಿ ವೀ.ಹೆಗ್ಗಡೆಯವರ ನಿರ್ದೇಶನದಲ್ಲಿ ಮೂಡಿಬಂದ ಕೇಳೆಸಖಿ ಚಂದ್ರಮುಖಿ ನಾಟಕ ಪ್ರದರ್ಶನ ನಡೆಯಿತು. ಯೋಗ ತರಬೇತಿಯನ್ನು ಡಾ.ಐ.ಶಶಿಕಾಂತ್ ಜೈನ್ ನಡೆಸಿಕೊಟ್ಟರು. ಭಜನಾ ಕಮ್ಮಟದ ರಾಜ್ಯ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್, ಕಾರ್ಯದರ್ಶಿ ವೀರು ಶೆಟ್ಟಿ, ಕೋಶಾಧಿಕಾರಿ ಧನ್ಯಕುಮಾರ್, ಸದಸ್ಯ ಶ್ರೀನಿವಾಸರಾವ್, ರತ್ನವರ್ಮ ಜೈನ್ ದಿನದ ಕಾರ್ಯಕ್ರಮವನ್ನು ಸಂಘಟಿಸಿದರು, ರಾಘವೇಂದ್ರ ನಿರೂಪಿಸಿದರು.

ಪರಿಷತ್ ಅಧ್ಯಕ್ಷ ಚಂದ್ರಶೇಖರ ಸಾಲ್ಯಾನ್, ಉಪಾಧ್ಯಕ್ಷ ರಾಜೇಂದ್ರ ಕುಮಾರ್, ಸದಸ್ಯರಾದ ಪದ್ಮರಾಜ್ ಜೈನ್ ಸಹಕರಿಸಿದರು. ಕುಣಿತ ಭಜನೆ ತರಬೇತಿಯನ್ನು ಸಂದೇಶ, ವಿನ್ಯಾಶ್, ನಾಗೇಶ್ ಹಾಗೂ ಚೈತ್ರ ನಡೆಸಿಕೊಟ್ಟರು. ಶಿಬಿರಾರ್ಥಿಗಳಾಗಿ ರಾಘವೇಂದ್ರ, ಸಂತೋಷ್ ಪಿ.ಕರ್ತವ್ಯ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net