ರಾಜ್ಯ ಕಾಂಗ್ರೆಸ್​ ಸರ್ಕಾರಕ್ಕೆ ತೀವ್ರ ಮುಖಭಂಗ...

Yashpal
Published on

ಉಡುಪಿ ಶಾಸಕ ಯಶ್​ಪಾಲ್​ ಸುವರ್ಣ ಅನಿಸಿಕೆ

ಜನೌಷಧ ಕೇಂದ್ರ ಸ್ಥಗಿತ ಆದೇಶಕ್ಕೆ ಕೋರ್ಟ್​ ತಡೆಯಾಜ್ಞೆ

ವಿಜಯವಾಣಿ ಸುದ್ದಿಜಾಲ ಉಡುಪಿ

ರಾಜ್ಯದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿರುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನ ಮಂತ್ರಿ ಜನೌಷಧ ಕೇಂದ್ರ ಸ್ಥಗಿತಗೊಳಿಸಲು ರಾಜ್ಯ ಕಾಂಗ್ರೆಸ್​ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್​ ತಡೆಯಾಜ್ಞೆ ನೀಡಿದೆ. ಇದು ಸಿದ್ದರಾಮಯ್ಯ ಸರ್ಕಾರದ ಹಿನ್ನಡೆಯಾಗಿದ್ದು, ತೀವ್ರ ಮುಖಭಂಗಕ್ಕೆ ಕಾರಣವಾಗಿದೆ ಎಂದು ಉಡುಪಿ ಶಾಸಕ ಯಶ್​ಪಾಲ್​ ಸುವರ್ಣ ಅನಿಸಿಕೆ ವ್ಯಕ್ತಪಡಿಸಿದ್ದಾರೆ.

ಬಡ ವರ್ಗದ ಜನರಿಗೆ ಕೈಗೆಟುಕುವ ದರದಲ್ಲಿ ಜೆನೆರಿಕ್​ ಔಷಧ ಲಭ್ಯವಾಗುವಂತೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕೇಂದ್ರ ಸರ್ಕಾರ ಜನೌಷಧ ಕೇಂದ್ರ ತೆರೆದಿತ್ತು. ಆದರೆ, ಸಿದ್ದರಾಮಯ್ಯ ಸರ್ಕಾರ ಅದನ್ನು ಸ್ಥಗಿತಗೊಳಿಸಲು ಮುಂದಾಗಿತ್ತು. ರಾಜ್ಯದ ಆರೋಗ್ಯ ಇಲಾಖೆಯು ಜನೌಷಧ ಕೇಂದ್ರ ಬಂದ್​ ಮಾಡುವಂತೆ ಆದೇಶ ಜಾರಿ ಮಾಡಿತ್ತು. ಅದರಿಂದಾಗಿ ರಾಜ್ಯದ ಜಿಲ್ಲೆಗಳ ವಿವಿಧ ಆಸ್ಪತ್ರೆಯಲ್ಲಿದ್ದ ಜನೌಷಧ ಕೇಂದ್ರ ಮುಚ್ಚಲ್ಪಟ್ಟಿತ್ತು ಎಂದು ತಿಳಿಸಿದ್ದಾರೆ.

ಸ್ಪಂದಿಸದ ಸಿಎಂ ಸಿದ್ದರಾಮಯ್ಯ

ಬಡ ರೋಗಿಗಳಿಗೆ ಕಡಿಮೆ ಬೆಲೆಯಲ್ಲಿ ಔಷಧ ದೊರೆಯದೆ ತೀವ್ರ ಸಮಸ್ಯೆ ಉಂಟಾಗುತ್ತಿರುವುದಕ್ಕೆ ಸಾರ್ವಜನಿಕರು ಮತ್ತು ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ನಿರ್ಧಾರ ಹಿಂಪಡೆಯುವಂತೆ ಮನವಿ ಮಾಡಿದ್ದರೂ ರಾಜ್ಯ ಸರ್ಕಾರ ಸ್ಪಂದಿಸಿರಲಿಲ್ಲ. ಇದೀಗ ನ್ಯಾಯಾಲಯವೇ ತಡೆಯಾಜ್ಞೆ ನೀಡುವ ಮೂಲಕ ಜನ ವಿರೋಧಿ ನೀತಿಗೆ ಸಿಎಂಗೆ ತಕ್ಕ ಉತ್ತರ ನೀಡಿದೆ ಎಂದು ಯಶ್​ಪಾಲ್​ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಅನ್ನಭಾಗ್ಯ ಅಕ್ಕಿ ಸಾಗಾಟ ಮಾಡಿದ್ದ ಲಾರಿ ಮಾಲೀಕರಿಗೆ ಸಾಗಣೆ ವೆಚ್ಚದ ಬಾಕಿ ನೀಡಿರಲಿಲ್ಲ. ಲಾರಿ ಮಾಲೀಕರು ಸರ್ಕಾರದ ವಿರುದ್ಧ ಅರ್ನಿದಿಷ್ಟಾವಧಿ ಮುಷ್ಕರ ಮಾಡುವುದಾಗಿ ಎಚ್ಚರಿಕೆ ಕೊಟ್ಟಿದ್ದರಿಂದ ಮಣಿದು 244 ಕೋಟಿ ರೂ. ಬಾಡಿಗೆ ಹಣ ಬಿಡುಗಡೆ ಮಾಡಿದೆ. ಮೆಸ್ಕಾಂ ಗ್ರಾಹಕರಿಂದ ಪ್ರತಿ ಯೂನಿಟ್​ ಮೇಲೆ 36 ಪೈಸೆ ಹೆಚ್ಚುವರಿಯಾಗಿ ಹಣ ಪಡೆದು ಸಿಬ್ಬಂದಿಯ ಪಿಂಚಣಿ ನಿಧಿ ಸಂಗ್ರಹಿಸುವ ದುಸ್ಥಿತಿ ಕಾಂಗ್ರೆಸ್​ ಸರ್ಕಾರದಿಂದ ರಾಜ್ಯದಲ್ಲಿ ನಿರ್ಮಾಣವಾಗಿದೆ. | ಯಶ್​ಪಾಲ್​ ಸುವರ್ಣ. ಉಡುಪಿ ಶಾಸಕ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net