ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲ

22-04-Shiva-2
ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ರಾಯಚೂರಿನ ಅಂಬೇಡ್ಕರ್ ವೃತ್ತದಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಶಾಸಕ ಡಾ.ಶಿವರಾಜ ಪಾಟೀಲ್, ಮಾಜಿ ಎಂಎಲ್ಸಿ ಎನ್.ಶಂಕ್ರಪ್ಪ, ಪದಾಕಾರಿಗಳಾದ ಕೆ.ಎಂ.ಪಾಟೀಲ್, ಶಿವಪ್ಪ ಮಾಲಿಪಾಟೀಲ್, ಈ.ಶಶಿರಾಜ, ಎನ್.ಕೆ.ನಾಗರಾಜ, ನರಸಪ್ಪ ಯಕ್ಲಾಸಪುರ, ರಾಜಕುಮಾರ, ರಾಘವೇಂದ್ರ ಉಟ್ಕೂರು, ಡಾ.ಶರಣಬಸವ ಪಾಟೀಲ್ ಜೋಳದಹೆಡಗಿ, , ಶರಣಮ್ಮ ಕಾಮರೆಡ್ಡಿ ಇದ್ದರು.
Published on

ರಾಯಚೂರು: ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಹಾಗೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿರುವುದನ್ನು ಖಂಡಿಸಿ ಸ್ಥಳೀಯ ಅಂಬೇಡ್ಕರ್ ವೃತ್ತದಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು, ನೇಹಾ ಹತ್ಯೆ ಬಗ್ಗೆ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ ಹೇಳಿಕೆಯನ್ನು ಖಂಡಿಸಿ, ಲವ್ ಜಿಹಾದ್‌ಗೆ ಕಡಿವಾಣ ಹಾಕಲು ಸರ್ಕಾರ ಮುಂದಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಗರ ಶಾಸಕ ಡಾ.ಶಿವರಾಜ ಪಾಟೀಲ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಅಕಾರಕ್ಕೆ ಬಂದು 9 ತಿಂಗಳು ಗತಿಸಿದ್ದು, ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಹಾಕಿದವರು ಅಲ್ಲಿಯೇ ತಿರುಗಾಡುತ್ತಿದ್ದಾರೆ. ಇನ್ನೂ ರಾಜ್ಯದ ಗಲ್ಲಿಗಳಲ್ಲಿ ಇಂತಹ ಘೋಷಣೆ ಕೇಳಿ ಬರುವುದನ್ನು ಊಹಿಸಲು ಅಸಾಧ್ಯವಾಗಿದೆ.
ರಾಮೇಶ್ವರಂ ಕೆೆ ಬಾಂಬ್ ಸ್ಪೋಟ, ಹಿಂದು ಕಾರ್ಯಕರ್ತರ ಮೇಲೆ ಹಲ್ಲೆಗಳು ನಡೆದಿದ್ದು, ಜನರಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಇಂತಹ ಘಟನೆಗಳು ನಡೆಯುತ್ತಿರುವುದನ್ನು ಗಮನಿಸುತ್ತಿದ್ದಾರೆ. ಕಾಂಗ್ರೆಸ್‌ನವರು ಜನರು ಕಾಲಿ ಚಿಪ್ಪು ನೀಡಿದ್ದಾರೆ. ಬಿಜೆಪಿ ನೀಡಿದೆ ಎಂದು ಹೇಳುವ ಚೊಂಬು ಅಕ್ಷಯ ಪಾತ್ರೆಯಾಗಿದೆ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಮಾಜಿ ಎಂಎಲ್ಸಿ ಎನ್.ಶಂಕ್ರಪ್ಪ, ಪದಾಕಾರಿಗಳಾದ ಕೆ.ಎಂ.ಪಾಟೀಲ್, ಶಿವಪ್ಪ ಮಾಲಿಪಾಟೀಲ್, ಈ.ಶಶಿರಾಜ, ಎನ್.ಕೆ.ನಾಗರಾಜ, ನರಸಪ್ಪ ಯಕ್ಲಾಸಪುರ, ರಾಜಕುಮಾರ, ರಾಘವೇಂದ್ರ ಉಟ್ಕೂರು, ಡಾ.ಶರಣಬಸವ ಪಾಟೀಲ್ ಜೋಳದಹೆಡಗಿ, ಲಲಿತಾ ಆಂಜಿನೇಯ, ರಾಜೇಶ್ವರಿ ಗೋಪಿಶೆಟ್ಟಿ, ಶರಣಮ್ಮ ಕಾಮರೆಡ್ಡಿ, ನಾಗರಾಜ ಪಲಗುಲ, ಶಂಶಾಲಂ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net