ಬರ ಪರಿಹಾರಕ್ಕೆ ರಾಜ್ಯ ಸರ್ಕಾರ ನಯಾಪೈಸೆ ಬಿಡುಗಡೆ ಮಾಡಿಲ್ಲ

20 HANUR 1
ಮಣಗಳ್ಳಿ ಗ್ರಾಮದ ಜಮೀನೊಂದರಲ್ಲಿ ಮಳೆಯಿಲ್ಲದ ಪರಿಣಾಮ ಕನಕಾಂಬರ ಗಿಡಗಳು ಸೊರಗಿರುವುದು.
Published on

ಮೈಸೂರು: ಬರ ಪರಿಹಾರಕ್ಕೆ ರಾಜ್ಯ ಸರ್ಕಾರ ನಯಾಪೈಸೆ ಬಿಡುಗಡೆ ಮಾಡಿಲ್ಲ ಎಂದು ಶಾಸಕ ಟಿ.ಎಸ್.ಶ್ರೀವತ್ಸ ದೂರಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರ ಪರಿಹಾರ ವಿಚಾರದಲ್ಲಿ ರಾಜ್ಯ ಸರ್ಕಾರ ರಾಜಕೀಯ ಮಾಡುತ್ತಿದೆ. ಕೇಂದ್ರ ಸರ್ಕಾರದ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದೆ. ಆದರೆ, ರಾಜ್ಯ ಸರ್ಕಾರ ಇದುವರೆಗೂ ಬರ ಪರಿಹಾರಕ್ಕೆಂದು ನಯಾ ಪೈಸೆ ಬಿಡುಗಡೆ ಮಾಡಿಲ್ಲ. ಬಿಡುಗಡೆ ಮಾಡಿದ್ದರೆ ದಾಖಲೆಗಳನ್ನು ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು.

ಐಎನ್‌ಡಿಐಎ ಮೈತ್ರಿಕೂಟದ ಸಭೆ ನಡೆದ ಬಳಿಕ ರಾಜ್ಯದಿಂದ ತಮಿಳುನಾಡಿಗೆ ನೀರು ಹರಿಸಲಾಯಿತು. ತಮಿಳುನಾಡನ್ನು ಓಲೈಸಲು ನೀರು ಹರಿಸಿದರು. ಅವರು ಕೇಳದಿದ್ದರೂ ಇಲ್ಲಿಂದ ಬೇಕಾಬಿಟ್ಟಿ ನೀರು ಹರಿಸಿದ್ದಾರೆ. ಪರಿಣಾಮ ರಾಜ್ಯದ ಜನತೆಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಬೆಂಗಳೂರಿನ ಹಲವೆಡೆ ಕುಡಿಯುವ ನೀರಿನ ಅಭಾವ ಉಂಟಾಗಿದ್ದು, ಮುಂದಿನ ದಿನಗಳಲ್ಲಿ ಮಳೆಯಾಗದಿದ್ದರೇ ಮೈಸೂರಿನಲ್ಲೂ ಸಮಸ್ಯೆ ಆಗಬಹುದು. ಸದ್ಯದ ಮಟ್ಟಿಗೆ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿಲ್ಲ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net