

ರಾಯಚೂರು: ಬರ ನಿರ್ವಹಣೆಯಲ್ಲಿ ರಾಜ್ಯ ಸಂಪೂರ್ಣ ವಿಲವಾಗಿದ್ದು, ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಮೂಲಕ ತನ್ನ ಕರ್ತವ್ಯವನ್ನು ನಿರ್ವಹಿಸುತ್ತಿಲ್ಲ. ರೈತರ ಬಗ್ಗೆ ಸರ್ಕಾರಕ್ಕೆ ಕಾಳಜಿಯಿಲ್ಲ ಎಂದು ಮಾಜಿ ಸಚಿವ ವೆಂಕಟರಾವ್ ನಾಡಗೌಡ ಹೇಳಿದರು.
ಜೆಡಿಎಸ್‌ನಿಂದ ಹಮ್ಮಿಕೊಂಡಿರುವ ಬರ ಸ್ಥಿತಿ ಅಧ್ಯಯನ ತಂಡ ನೇತೃತ್ವ ವಹಿಸಿ ತಾಲೂಕಿನ ಗೋನಾಳ ಗ್ರಾಮಕ್ಕೆ ಶುಕ್ರವಾರ ಭೇಟಿ ನೀಡಿ ಮಾತನಾಡಿ, ಮುಂಗಾರು ಮಳೆ ವಿಲವಾಗಿ ಬೆಳೆಗಳು ಸಂಪೂರ್ಣವಾಗಿ ಹಾಳಾಗಿದ್ದು, ರೈತರು ನಷ್ಟಕ್ಕೆ ಗುರಿಯಾಗಿದ್ದಾರೆ ಎಂದರು.
ಬರ ಪರಿಹಾರ ಕಾಮಗಾರಿ ಕೈಗೊಳ್ಳುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ನಿರ್ಲಕ್ಷ ತೋರಿದ್ದು, ನಷ್ಟದ ಬಗ್ಗೆ ಸಮರ್ಪಕ ಸರ್ವೇ ಕಾರ್ಯ ನಡೆಸಿ ಪರಿಹಾರ ನೀಡಿಲ್ಲ. ಆತ್ಮಹತ್ಯೆ ಮಾಡಿಕೊಂಡ ರೈತ ಬಸವರಾಜ ಕುಟುಂಬಕ್ಕೆ ಪರಿಹಾರ ನೀಡುವುದಿರಲಿ ಒಬ್ಬ ಅಕಾರಿಯೂ ಅವರ ಮನೆಗೆ ಭೇಟಿ ನೀಡಿಲ್ಲ ಎಂದು ದೂರಿದರು.
ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಮಾತನಾಡಿ, ಪಕ್ಷದಿಂದ ಜಿಲ್ಲೆಯಲ್ಲಿ ಬರ ಅಧ್ಯಯನ ನಡೆಸಲಾಗುತ್ತಿದ್ದು, ಜಿಲ್ಲಾಡಳಿತ ಬರ ಪರಿಹಾರ ಕಾಮಗಾರಿ ಕೈಗೊಳ್ಳದೆ ಕೇವಲ ಸಭೆ ನಡೆಸುವುದಕ್ಕೆ ಮಾತ್ರ ಸಿಮೀತವಾಗಿದೆ. ರೈತರಿಗೆ ಸರ್ಕಾರದಿಂದ ಸೂಕ್ತ ಸ್ಪಂದನೆ ಸಿಗುತ್ತಿಲ್ಲ ಎಂದರು.
ತಂಡ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತ ಬಸವರಾಜ ಮನೆಗೆ ಭೇಟಿ ನೀಡಿ 20 ಸಾವಿರ ರೂ. ಆರ್ಥಿಕ ಸಹಾಯ ನೀಡಲಾಯಿತು. ನಂತರ ಗೋನಾಳ ಸೇರಿದಂತೆ ವಿವಿಧ ಗ್ರಾಮಗಳ ಹೊಲಗಳಿಗೆ ಭೇಟಿ ನೀಡಿ ಬೆಳೆ ಹಾನಿ ಕುರಿತು ಪರಿಶೀಲನೆ ನಡೆಸಲಾಯಿತು.
ತಂಡದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಎಂ.ವಿರುಪಾಕ್ಷಿ, ಪದಾಕಾರಿಗಳಾದ ಮಹಾಂತೇಶ ಪಾಟೀಲ್ ಅತ್ತನೂರು, ಸಿದ್ದು ಬಂಡಿ, ಸಣ್ಣ ನರಸಿಂಹ ನಾಯಕ, ಯುಸ್ೂಖಾನ್, ಎನ್.ಶಿವಶಂಖರ, ಲಕ್ಷ್ಮಿಪತಿ ಗಾಣಧಾಳ, ಅಮರೇಶ ಪಾಟೀಲ್, ಬುಡ್ಡಿನಗೌಡ, ವಿಶ್ವನಾಥ ಪಟ್ಟಿ, ಮಲ್ಲಿಕಾರ್ಜುನ ಬಲ್ಲಟಗಿ ಇದ್ದರು.