ಮಹದಾಯಿ ಕಾಮಗಾರಿಗೆ ರಾಜ್ಯ ಸರ್ಕಾರ ಸಿದ್ಧತೆ

KONAREDDY
Published on

ನವಲಗುಂದ: ಮಹದಾಯಿ, ಕಳಸಾ ಬಂಡೂರಿ ಯೋಜನೆ ಕಾಮಗಾರಿ ಕೈಗೊಳ್ಳಲು ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಂಡಿದ್ದು ಕೇಂದ್ರ ಸರ್ಕಾರದ ಅನುಮತಿಗಾಗಿ ಕಾಯುತ್ತಿದ್ದೇವೆ ಎಂದು ಶಾಸಕ ಎನ್.ಎಚ್.ಕೋನರಡ್ಡಿ ಹೇಳಿದರು.

ಪಟ್ಟಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯೋಜನೆ ಜಾರಿಗೆ ಒತ್ತಾಯಿಸಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮನವಿ ಮಾಡಲಾಗಿದೆ.

ಗೋವಾ ಸರ್ಕಾರದ ಒತ್ತಡ ಮೆರೆಗೆ ಕೇಂದ್ರ ಸರ್ಕಾರ ರಚಿಸಿರುವ ಕೇಂದ್ರ ಮಹದಾಯಿ ಪ್ರವಾಹ ಪ್ರಾಧಿಕಾರದ ನಿಯೋಗದ ಅಧ್ಯಕ್ಷರು ಹಾಗೂ ಸದಸ್ಯರು ಭಾರಿ ಮಳೆಯಾಗುವ ಸಂದರ್ಭದಲ್ಲಿ ಮಹದಾಯಿ ಅಚ್ಚುಕಟ್ಟು ಪ್ರದೇಶಕ್ಕೆ ಭೇಟಿ ನೀಡಿ ಪರಿವೀಕ್ಷಣೆ ನಡೆಸುವ ಉದ್ದೇಶ ಏನು? ರಾಜ್ಯದ ಸಂಸದರು ಮಹದಾಯಿ ಯೋಜನೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು.

ವರದಮಾನಗೌಡ ಹಿರೇಗೌಡರ, ಮಂಜುನಾಥ ಮಾಯಾಣ್ಣವರ, ಮದಾರಸಾಬ ಉಗರಗೋಳ, ಶಿವಾನಂದ ಭೂಮಣ್ಣವರ ಮತ್ತಿತರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net