ಹಣ ಬಿಡುಗಡೆಗೆ ರಾಜ್ಯ ಸರ್ಕಾರ ತಾರತಮ್ಯ ಮಾಡದಿರಲಿ

new bjp work New
Published on

ಹುಬ್ಬಳ್ಳಿ : ಹುಬ್ಬಳ್ಳಿ -ಧಾರವಾಡ ಸೆಂಟ್ರಲ್ ಕ್ಷೇತ್ರದ 55ನೇ ವಾರ್ಡ್​ನ ಅರವಿಂದ ನಗರದ ಮುಖ್ಯ ರಸ್ತೆ ಸೇರಿದಂತೆ ಎರಡು ಕೋಟಿ ರೂ. ವೆಚ್ಚದ 600 ಮೀಟರ್ ಸಿಸಿ ರಸ್ತೆ ಕಾಮಗಾರಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸೋಮವಾರ ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಪ್ರಲ್ಹಾದ ಕೋಶಿ, ಸೆಂಟ್ರಲ್ ಕ್ಷೇತ್ರದಲ್ಲಿ ನಿರಂತರವಾಗಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಕ್ಷೇತ್ರಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರವು ಹಣ ಬಿಡುಗಡೆಗೆ ತಾರತಮ್ಯ ಮಾಡಬಾರದು ಎಂದು ಹೇಳಿದರು.

ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ಸೆಂಟ್ರ್ರ್ ಕ್ಷೇತ್ರದಲ್ಲಿ ಹಂತ ಹಂತವಾಗಿ ಸಿಸಿ ಹಾಗೂ ಡಾಂಬರ್ ರಸ್ತೆಗಳ ಕಾಮಗಾರಿ, ಕುಡಿಯುವ ನೀರು ಸೇರಿದಂತೆ ಹಲವಾರು ಕಾರ್ಯಗಳು ನಡೆಯುತ್ತಿವೆ. ಸ್ವಚ್ಛತೆ ಮತ್ತು ಮೂಲ ಸೌಕರ್ಯ ಒದಗಿಸಲು ಆದ್ಯತೆ ನೀಡಲಾಗುವುದು ಎಂದರು. ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ಮಾಜಿ ಶಾಸಕಿ ಸೀಮಾ ಮಸೂತಿ, ಮಹಾಪೌರ ರಾಮಣ್ಣ ಬಡಿಗೇರ, ಪಾಲಿಕೆ ಸದಸ್ಯರಾದ ರಫೀಕ ನವಲೂರ, ಸಭಾ ನಾಯಕ ವೀರಣ್ಣ ಸವಡಿ, ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಮಾಜಿ ಮಹಾಪೌರರಾದ ಡಾ.ಪಾಂಡುರಂಗ ಪಾಟೀಲ, ಈರೇಶ ಅಂಚಟಗೇರಿ, ಪ್ರಮುಖರಾದ ರವಿ ನಾಯಕ, ಡಾ. ಕ್ರಾಂತಿ ಕಿರಣ, ತೋಟಪ್ಪ ನಿಡಗುಂದಿ, ಗುರುನಾಥ ಮೈಲಿ, ವಿನಾಯಕ ಕುಲಕರ್ಣಿ, ರೇಖಾ ಕಾಟಕರ, ಪ್ರಭು ನವಲಗುಂದಮಠ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net