ಸೋಮವಾರಪೇಟೆ: ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ರಾಜ್ಯ ಸರ್ಕಾರದ ಘೋಷಣೆ ಸ್ವಾಗತಾರ್ಹ ಕ್ರಮ ಎಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ತಿಳಿಸಿದ್ದಾರೆ.
12ನೇ ಶತಮಾನದಲ್ಲಿ ಕ್ರಾಂತಿಕಾರಕ ಹೆಜ್ಜೆಯನ್ನಿಟ್ಟು ಅಂದಿನ ಸಮಾಜದಲ್ಲಿ ಬೇರೂರಿದ್ದ ಅಸಮಾನತೆ, ಜಾತೀಯತೆ, ಕಂದಾಚಾರದ, ಮೂಢನಂಬಿಕೆ ವಿರುದ್ಧ ಹೋರಾಡಿದ ಸಮಾಜ ಸುಧಾರಕ. ಅಂದೇ ಅನುಭವ ಮಂಟಪ ಸ್ಥಾಪಿಸಿ ಇಂದಿನ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಡಿಪಾಯ ಹಾಕಿದವರು. ಇಂತಹ ಮಹಾನ್ ವ್ಯಕ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಸಂಪುಟ ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ನಿರ್ಧರಿಸಿ ಘೋಷಿರುವುದು ಸ್ವಾಗತಾರ್ಹ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.