ರಾಜ್ಯ ಸರ್ಕಾರದ ಗ್ಯಾರಂಟಿ ಸಮಾವೇಶ ಇಂದು

N S BOSRAJ PRESS MEET (3)
Published on

ರಾಯಚೂರು: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮಾ.14ರಂದು ಬೆಳಗ್ಗೆ 11ಕ್ಕೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ತಿಳಿಸಿದರು.
ಸ್ಥಳೀಯ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾವೇಶ ಉದ್ಘಾಟಿಸಲಿದ್ದು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹಾಗೂ ಸಚಿವರು, ಶಾಸಕರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ಪಕ್ಷ ಚುನಾವಣೆ ಪೂರ್ವದಲ್ಲಿ ನೀಡಿದ ಭರವಸೆಯಂತೆ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದು, ಯೋಜನೆಗಳ ಜಾರಿಯಾಗಿರುವ ರೀತಿಯ ಕುರಿತು ಜನರಿಗೆ ಮಾಹಿತಿ ನೀಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ಸಮಾವೇಶ ಏರ್ಪಡಿಸಲಾಗುತ್ತಿದೆ.
ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಯಡಿ 90.97 ಕೋಟಿ ರೂ.ಗಳ ವಿದ್ಯುತ್ ಬಿಲ್ ಸಬ್ಸಿಡಿ ನೀಡಲಾಗಿದೆ. ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ 3.24 ಕೋಟಿ ಜನರು ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡಿದ್ದು, 118 ಕೋಟಿ ರೂ. ಪಾವತಿ ಮಾಡಲಾಗಿದೆ.
ಅನ್ನಭಾಗ್ಯ ಯೋಜನೆಯಡಿ ಐದು ಕೆಜಿ ಅಕ್ಕಿ ಬದಲಾಗಿ ಲಾನುಭವಿಗಳ ಖಾತೆಗೆ 141 ಕೋಟಿ ರೂ. ಪಾವತಿಸಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ 22.54 ಲಕ್ಷ ಲಾನುಭವಿಗಳಿಗೆ 450 ಕೋಟಿ ರೂ. ಖಾತೆಗೆ ಜಮಾ ಮಾಡಲಾಗಿದೆ. ಯುವನಿ ಯೋಜನೆಯಡಿ 2,325 ಯುವಜನರು ನೋಂದಣಿ ಮಾಡಿಸಿಕೊಂಡಿದ್ದು, 1.34 ಕೋಟಿ ರೂ. ಪಾವತಿಸಲಾಗಿದೆ.
ಕೃಷ್ಣಾ ನದಿಯಿಂದ ಗಣೇಕಲ್ ನೀರು ತುಂಬಿಸುವ 211.53 ಕೋಟಿ ರೂ. ವೆಚ್ಚದ ಯೋಜನೆಗೆ ನಾಳೆ ಉದ್ಘಾಟನೆ ಮಾಡಲಾಗುತ್ತಿದ್ದು, ರಾಯಚೂರು ವಿವಿಯಲ್ಲಿ 47.32 ಕೋಟಿ ರೂ. ವೆಚ್ಚದ ಡಿಎನ್‌ಎ ಪ್ರಯೋಗಾಲಯ, 22.25 ಕೋಟಿ ರೂ. ವೆಚ್ಚದಲ್ಲಿ ವಿಜ್ಞಾನ ಕೇಂದ್ರದ ಅಭಿವೃದ್ಧಿ ಕಾಮಗಾರಿ ಚಾಲನೆ ನೀಡಲಾಗುತ್ತಿದೆ.
ಮಾನ್ವಿ ತಾಲೂಕಿನ ಚೀಕಲಪರ್ವಿ ಹತ್ತಿರ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ 275 ಕೋಟಿ ರೂ. ಬಜೆಟ್‌ನಲ್ಲಿ ಮಂಜೂರಾತಿ ನೀಡಲಾಗಿದ್ದು, ಮನ್ಸಲಾಪುರ ರಸ್ತೆಯಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ರೈಲ್ವೆ ಮೇಲ್ಸೆತುವೆ ನಿರ್ಮಾಣ ಮಾಡಲಾಗುತ್ತದೆ ಎಂದು ಎನ್.ಬೋಸರಾಜು ತಿಳಿಸಿದರು.
ಈ ಸಂದರ್ಭದಲ್ಲಿ ಮಾನ್ವಿ ಶಾಸಕ ಹಂಪಯ್ಯ ನಾಯಕ, ನಗರಸಭೆ ಸದಸ್ಯ ಜಯಣ್ಣ, ಮುಖಂಡರಾದ ಮಹ್ಮದ್ ಶಾಲಂ, ಜಿ.ಬಸವರಾಜ ರೆಡ್ಡಿ, ರುದ್ರಪ್ಪ ಅಂಗಡಿ, ಕೆ.ಶಾಂತಪ್ಪ, ರವಿ ಪಾಟೀಲ್, ಜಿ.ಶಿವಮೂರ್ತಿ ಉಪಸ್ತಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net