

ಬೆಂಗಳೂರು: ಕಪಾಲಿ ಬೆಟ್ಟದಲ್ಲಿ ಏಸು ಪ್ರತಿಮೆ ನಿರ್ವಣಕ್ಕೆ ಅವಕಾಶ ಕೊಡಬೇಕು. ಯಾವುದೇ ಕಾರಣಕ್ಕೂ ಯೋಜನೆ ತಡೆಹಿಡಿಯಬಾರದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಲ್ಲಿ ಕ್ರೖೆಸ್ತ ಸಮುದಾಯದ ನಿಯೋಗ ಮನವಿ ಮಾಡಿತು.
ಕಪಾಲಿ ಬೆಟ್ಟದಲ್ಲಿ ಏಸು ಕ್ರಿಸ್ತನ ಪ್ರತಿಮೆ ನಿರ್ಮಾಣ ವಿವಾದಾತ್ಮಕ ಸ್ವರೂಪ ಪಡೆಯುತ್ತಿರುವ ಹಿನ್ನೆಲೆಯಲ್ಲಿ ನಿಯೋಗ ಸಿಎಂ ಭೇಟಿ ಮಾಡಿತ್ತು. ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಕಳೆದ ವಾರ ಕಪಾಲಿ ಬೆಟ್ಟದಲ್ಲಿ ಏಸು ಪ್ರತಿಮೆ ನಿರ್ವಣಕ್ಕೆ ಭೂಮಿಪೂಜೆ ನೆರವೇರಿಸಿದ ನಂತರ ಈ ಜಾಗದ ವಿಚಾರ ವಿವಾದಕ್ಕೆ ಗ್ರಾಸವಾಗಿದೆ. ಏಸು ಪ್ರತಿಮೆಗೆ ನೀಡಿರುವ ಜಾಗ ಸರ್ಕಾರಿ ಜಾಗವಾಗಿದ್ದು, ಯಾವುದೇ ಕಾರಣಕ್ಕೂ ಸ್ಥಾಪನೆಗೆ ಅವಕಾಶ ಕೊಡುವುದಿಲ್ಲ ಎಂದು ಬಿಜೆಪಿ ನಾಯಕರು ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಕಪಾಲಿ ಬೆಟ್ಟದಲ್ಲಿ ಹಿಂದು ದೇವತೆಗಳನ್ನು ಪೂಜೆ ಮಾಡುತ್ತಿರುವ ಬಗ್ಗೆ ನಮಗೆ ಮಾಹಿತಿ ಇಲ್ಲ. ನಾವು ಯಾರನ್ನೂ ಮತಾಂತರ ಮಾಡುತ್ತಿಲ್ಲ. ಹಿಂದೆ ಬಂದಿದ್ದ ಕ್ರೖೆಸ್ತ ಮಷಿನರಿಗಳು ಮತಾಂತರ ಮಾಡಿರಬಹುದು. ಆದರೆ, ನಾವು ಒಂದೂವರೆ ಲಕ್ಷ ಮಕ್ಕಳಿಗೆ ವಿದ್ಯಾಭ್ಯಾಸ ನೀಡುತ್ತಿದ್ದೇವೆ. ಈ ಪೈಕಿ ಒಬ್ಬರನ್ನಾದರೂ ಮತಾಂತರ ಮಾಡಿದ್ದನ್ನು ತೋರಿಸಲಿ. | ಪೀಟರ್ ಮಚಾಡೋ ಬೆಂಗಳೂರು ಮಹಾಧರ್ಮ ಕ್ಷೇತ್ರದ ಧರ್ವಧ್ಯಕ್ಷ