ಅಂತೂ ವಿದ್ಯಾರ್ಥಿಗಳಿಗೆ ಸಿಕ್ತು ಶೂ, ಸಾಕ್ಸ್

19 NRD
Published on

ನರಗುಂದ: ವಿದ್ಯಾವಿಕಾಸ ಯೋಜನೆಯಿಂದ ವಂಚಿತರಾಗಿದ್ದ ತಾಲೂಕಿನ ಸರ್ಕಾರಿ ಶಾಲೆಗಳ ಮಕ್ಕಳಿಗೆ ಶೂ, ಸಾಕ್ಸ್ ವಿತರಿಸಲಾಗಿದ್ದು, ಬಡ ವಿದ್ಯಾರ್ಥಿಗಳ ಮುಖದಲ್ಲಿ ಮಂದಹಾಸ ಮೂಡಿದೆ.

ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ-ಪುಸ್ತಕ, ಸಮವಸ್ತ್ರಗಳ ವಿತರಣೆ ಜತೆಗೆ ಒಂದು ಜೊತೆ ಶೂ, ಎರಡು ಜೊತೆ ಸಾಕ್ಸ್ ವಿತರಿಸುವ ವಿದ್ಯಾವಿಕಾಸ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದರು. ಆದರೆ, ಪ್ರಸಕ್ತ ಶೈಕ್ಷಣಿಕ ಅವಧಿ ಮುಗಿಯುತ್ತ ಬಂದರೂ ಬಿಎಂಎಸ್ ನೂತನ ತಂತ್ರಾಂಶದ ನೆಪವೊಡ್ಡಿ ಜಿಲ್ಲೆಯ ಒಂದೇ ಒಂದು ವಿದ್ಯಾರ್ಥಿಗೆ ಶೂ, ಸಾಕ್ಸ್ ವಿತರಣೆ ಆಗಿರಲಿಲ್ಲ. ಪರಿಣಾಮ ಸರ್ಕಾರಿ ಶಾಲೆ ಮಕ್ಕಳು ಬರಿಗಾಲಿನಲ್ಲಿ ಶಾಲೆಗೆ ನಡೆದುಕೊಂಡು ಬರುವ ಪರಿಸ್ಥಿತಿ ನಿರ್ಮಾಣಗೊಂಡಿತ್ತು.

ಈ ಕುರಿತು ‘ವಿಜಯವಾಣಿ’ ಸೆ. 10ರಂದು ‘ವಿದ್ಯಾವಿಕಾಸ ಯೋಜನೆಗೆ ಗ್ರಹಣ’ ಶೀರ್ಷಿಕೆಯಡಿ ವಿಸ್ತ್ರತ ವರದಿ ಪ್ರಕಟಿಸಿ ಗಮನ ಸೆಳೆದಿತ್ತು. ವರದಿಯಿಂದ ಎಚ್ಚೆತ್ತುಕೊಂಡಿರುವ ಶಿಕ್ಷಣ ಇಲಾಖೆ ಅಧಿಕಾರಿಗಳು ಒಂದು ವಾರದೊಳಗೆ ತಾಲೂಕು ಸೇರಿದಂತೆ ಜಿಲ್ಲೆಯ ಬಹುತೇಕ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್ ವಿತರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net