ದಿ.ಸುರೇಶ ಅಂಗಡಿ ಪತ್ನಿಗೆ ಟಿಕೆಟ್ ನೀಡಲು ಒತ್ತಾಯ-ಲಿಂಗರಾಜ ಪಾಟೀಲ

Election-logo 22
Published on

ಬೆಳಗಾವಿ: ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ದಿ.ಸುರೇಶ ಅಂಗಡಿ ಅವರ ಪತ್ನಿ ಮಂಗಲಾ ಅಂಗಡಿ ಅಥವಾ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ ಕಟೀಲ್ಗೆ ಮನವಿ ಮಾಡಿಕೊಳ್ಳಲಾಗಿದೆ ಎಂದು ದಿ.ಅಂಗಡಿ ಸೋದರಮಾವ ಲಿಂಗರಾಜ ಪಾಟೀಲ ತಿಳಿಸಿದ್ದಾರೆ.

ಬೆಳಗಾವಿ ವಿಶ್ವೇಶ್ವರಯ್ಯ ನಗರದಲ್ಲಿರುವ ದಿ.ಸುರೇಶ ಅಂಗಡಿ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ ಕಟೀಲ್ ಭೇಟಿ ನೀಡಿ ತೆರಳಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಟಿಕೆಟ್ ನೀಡುವ ವಿಚಾರದಲ್ಲಿ ಪಕ್ಷದ ಮುಖಂಡರು ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು.

ಇದೇ ವೇಳೆ ದಿ.ಅಂಗಡಿ ನಿವಾಸದ ಮುಂಭಾಗದಲ್ಲಿ ದಿ.ಅಂಗಡಿ ಅಭಿಮಾನಿಗಳು, ಕಾರ್ಯಕರ್ತರು ಉಪ ಚುನಾವಣೆಯಲ್ಲಿ ದಿ.ಸುರೇಶ ಅಂಗಡಿ ಮನೆಯವರಿಗೆ ಟಿಕೆಟ್ ನೀಡಬೇಕು ಎಂದು ನಳಿನ್‌ಕುಮಾರ ಕಟೀಲ್ ಅವರಿಗೆ ಮನವಿ ಮಾಡಿಕೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net