ಶಾಸಕರ ಅಮಾನತು ಹಿಂಪಡೆಯಲಿ

1npn2
Published on

ನಿಪ್ಪಾಣಿ: ಸರ್ಕಾರ 18 ಬಿಜೆಪಿ ಶಾಸಕರ ಅಮಾನತು ಹಿಂಪಡೆಯಬೇಕು ಹಾಗೂ ಸರ್ಕಾರದ ಅನ್ಯಾಯ ನೀತಿ ವಿರೋಧಿಸಿ ರಾಜ್ಯ ಬಿಜೆಪಿ ವತಿಯಿಂದ ಏ.2ರಂದು ಬೆಂಗಳೂರಿನ ಫ್ರೀಡ್‌ಂ ಪಾರ್ಕ್‌ನಲ್ಲಿ ಧರಣಿ ಆಂದೋಲನ ನಡೆಯಲಿದೆ. 24 ಗಂಟೆಗಳ ಕಾಲ ನಡೆಯುವ ಧರಣಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸುವಂತೆ ಶಾಸಕಿ ಶಶಿಕಲಾ ಜೊಲ್ಲೆ ಮನವಿ ಮಾಡಿದರು.

ಇಲ್ಲಿನ ಶ್ರೀ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಬಿಜೆಪಿ ಸಭೆಯಲ್ಲಿ ಮಾತನಾಡಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ಗೊಂದಲ ಸೃಷ್ಟಿಯಾಗಿದೆ. ಸರ್ಕಾರ ಗ್ಯಾರಂಟಿ ಯೋಜನೆ ಹೆಸರಿನಲ್ಲಿ ಜನಸಾಮಾನ್ಯರನ್ನು ಶೋಷಣೆ ಮಾಡುತ್ತಿದೆ. ದಲಿತರ ಎಸ್‌ಸಿಪಿಟಿಎಸ್‌ಪಿ ಯೋಜನೆ 3,860 ಕೋಟಿ ರೂ. ಬೇರೆಡೆಗೆ ಬಳಸಲಾಗುತ್ತಿದೆ. ಇದರಿಂದ ದಲಿತರಿಗೆ ಅನ್ಯಾಯವಾಗಿದೆ. ನಾವು ಗ್ಯಾರಂಟಿ ಯೋಜನೆಗೆ ವಿರುದ್ಧವಾಗಿಲ್ಲ, ಆದರೆ, ಒಬ್ಬರಿಂದ ಪಡೆದು ಇನ್ನೊಬ್ಬರಿಗೆ ಕೊಡುವುದು ಸೂಕ್ತವಲ್ಲ ಎಂದರು.

ಸತೀಶ ಅಪ್ಪಾಜಿಗೋಳ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪ್ರಜಾಪ್ರಭುತ್ವವೇ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.

ಪ್ರಣವ ಮಾನವಿ ಮಾತನಾಡಿದರು. ಶಾಂಭವಿ ಅಶ್ವತ್ಥಪುರ, ಪ್ರವೀಣ ಕೆಂಪವಾಡ, ಸೂರಜ ಖವರೆ, ಸಿದ್ದು ನರಾಟೆ, ಸಂತೋಷ ಸಾಂಗಾವಕರ, ಅರುಣ ಜಾವಿರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net