ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕ ವೃತ್ತಿ ಶ್ರೇಷ್ಠವಾದದ್ದು

sid
Published on

ವಿಜಯವಾಣಿ ಸುದ್ದಿಜಾಲ ಬೆಳ್ವೆ

ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕ ವೃತ್ತಿ ಶ್ರೇಷ್ಠವಾದದ್ದು, ಶಿಕ್ಷಕರ ಪ್ರಾಮಾಣಿಕ ಸೇವಾ ನಿಷ್ಠೆಗೆ ಸಾಮಾಜದಲ್ಲಿ ಉನ್ನತ ಸ್ಥಾನಮಾನ, ಉತ್ತಮ ಗೌರವವಿದೆ ಎಂದು ಲಯನ್ಸ್ 317 ಸಿ ಶಿಕ್ಷಕರ ದಿನಾಚರಣೆ ಸಂಯೋಜಕ ಎಚ್.ವಸಂತಕುಮಾರ್ ಶೆಟ್ಟಿ ಬೆಳ್ವೆ ಹೇಳಿದರು.

ಆರ್ಡಿ ಬೆಳ್ವೆ ಗೋಳಿಯಂಗಡಿ ಲಯನ್ಸ್ ಹಾಗೂ ಲಿಯೋ ಕ್ಲಬ್ ವತಿಯಿಂದ ಬೆಳ್ವೆ ಸಂದೇಶ್ ಕಿಣಿ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಆರ್ಡಿ ಬೆಳ್ವೆ ಗೋಳಿಯಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಅಣ್ಣಯ್ಯ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಮುಖ್ಯಶಿಕ್ಷಕರಾದ ಸಂಜೀವ ಶೆಟ್ಟಿ ಬೆಳ್ವೆ ಹಾಗೂ ಸಂಜೀವ ಶೆಟ್ಟಿ ಬೆಪ್ಡೆ ಅವರನ್ನು ಸನ್ಮಾನಿಸಲಾಯಿತು.

ಲಯನ್ಸ್ ಕ್ಲಬ್ ಕಾರ್ಯದರ್ಶಿ ಕೆ.ಸಂಜೀವ ಆರ್ಡಿ, ಕೋಶಾಧಿಕಾರಿ ಬಾಲಮುರಳಿಕೃಷ್ಣ, ನಿಕಟ ಪೂರ್ವಾಧ್ಯಕ್ಷ ಎಸ್.ಜಯರಾಮ ಶೆಟ್ಟಿ ಸುರ‌್ಗೋಳಿ, ಸ್ಥಾಪಾಕಾಧ್ಯಕ್ಷ ಬಿ.ರಾಜೇಂದ್ರ ಕಿಣಿ, ಉಪಾಧ್ಯಕ್ಷ ಮುಸ್ತಾಕ್ ಅಹಮ್ಮದ್, ಮಾಜಿ ಉಪಾಧ್ಯಕ್ಷ ಬಾಬು ಶೆಟ್ಟಿ ಜಗ್ಲುಗುಡ್ಡೆ, ಕೋಶಾಧಿಕಾರಿ ಜಯಪ್ರಕಾಶ್ ಶೆಟ್ಟಿ ಯಳಂತೂರು, ಚಂದ್ರಿಕಾ ಬೆಳ್ವೆ, ಸದಸ್ಯ ಬಿ.ಶಂಕರ ಶೆಟ್ಟಿ, ಜಯಪ್ರಕಾಶ ಶೆಟ್ಟಿ, ಪ್ರಭಾಕರ ಶೆಟ್ಟಿ ಹೊನ್ಕಲ್ಲು, ಕೇಶವ, ಶಾಲಿನಿ ಪ್ರೇಮಕುಮಾರ್, ಉಷಾ ಪಿ.ಶೆಟ್ಟಿ, ತೀರ್ಥಕಲಾ ಗುಮ್ಮೋಲ, ಲಿಯೋ ಕ್ಲಬ್ ಯುವ ಶಕ್ತಿ ಅಧ್ಯಕ್ಷ ಸೃಜನ್ ಶೆಟ್ಟಿ ಇತರರಿದ್ದರು.

ಎಸ್.ಜಯರಾಮ ಶೆಟ್ಟಿ ಸುರ‌್ಗೋಳಿ ಸ್ವಾಗತಿಸಿದರು. ಭಾರ್ಗವಿ.ಪಿ.ಭಟ್, ಶಶಿಕಲಾ ಅಲ್ಸೆ ಸೆಟ್ಟೋಳಿ ಪ್ರಾರ್ಥಿಸಿದರು. ಬಿ.ರಾಜೇಂದ್ರ ಕಿಣಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೆ.ಸಂಜೀವ ಆರ್ಡಿ ಕಾರ್ಯಕ್ರಮ ನಿರೂಪಿಸಿದರು. ಬಾಲಮುರಳಿಕೃಷ್ಣ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net