

ಶಿವಮೊಗ್ಗ: ನಗರದಲ್ಲಿ ನಡೆದ ಹಿಂದು ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ಬಂದೋಬಸ್ತ್ ಗೆ ಮಫ್ತಿಯಲ್ಲಿದ್ದ ಮಹಿಳಾ ಪೇದೆಯ 44 ಸಾವಿರ ರೂ. ಮೌಲ್ಯದ ಮಾಂಗಲ್ಯ ಸರ ಕಳವು ಮಾಡಲಾಗಿದೆ.
ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆ ಪೇದೆ ನಾಗರತ್ನ ಮಾಂಗಲ್ಯ ಸರ ಕಳೆದುಕೊಂಡವರು. ಸೆ.17ರಂದು ನಗರದಲ್ಲಿ ಹಿಂದು ಮಹಾಸಭಾ ಗಣಪತಿ ಮೆರವಣಿಗೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ಈ ವೇಳೆ ಮಫ್ತಿ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿಯು, ಟಿ. ಸೀನಪ್ಪ ಶೆಟ್ಟಿ ವೃತ್ತಕ್ಕೆ ಆಗಮಿಸಿದಾಗ ಮಾಂಗಲ್ಯ ಸರ ಇಲ್ಲದಿರುವುದು ಗೊತ್ತಾಗಿದೆ. ಈ ಬಗ್ಗೆ ದೊಡ್ಡಪೇಟೆ ಠಾಣೆ ಪ್ರಕರಣ ದಾಖಲಾಗಿದೆ.