ಮಹನೀಯರ ಚಿಂತನೆಗಳು ಇಂದಿಗೂ ಪ್ರಸ್ತುತ

Published on

ಬಳ್ಳಾರಿ : ಬುದ್ಧ, ಬಸವ, ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಅವರು ಚಿಂತೆನೆಗಳು ಇಂದಿಗೂ ಪ್ರಸ್ತುತವಾಗಿದ್ದು, ಇವರ ತತ್ವಾದರ್ಶಗಳು

ಭಾರತವಲ್ಲದೇ ಜಗತ್ತಿಗೂ ಅನ್ವಯವಾಗುತ್ತಿವೆ ಎಂದು ವಿಎಸ್‌ಕೆ ವಿವಿ ಕುಲಪತಿ ಪ್ರೊ. ಎಂ. ಮುನಿರಾಜು ಹೇಳಿದರು.

ನಗರದ ವಿಎಸ್‌ಕೆ ವಿವಿಯಲ್ಲಿ ವಿರ್ಥಿಗಳಿಗಾಗಿ ಬುಧವಾರ ಹಮ್ಮಿಕೊಂಡಿದ್ದ ಬುದ್ಧ, ಬಸವ, ಅಂಬೇಡ್ಕರ್ ಕುರಿತಾದ ಪ್ರತ್ಯೇಕ ಭಾಷಣ ಸ್ಪರ್ಧೆಗಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮೂವರು ಮಹನೀಯರನ್ನು ಸರ್ವಜನಾಂಗದವರು ಒಪ್ಪಿಕೊಂಡಿದ್ದಾರೆ. ಇವರ ಕುರಿತು ಆಳ ಜ್ಞಾನವನ್ನು ವಿದ್ಯಾರ್ಥಿಗಳು ಪಡೆದುಕೊಂಡು ಪರರ ಏಳಿಗೆಗಾಗಿ ಶ್ರಮಿಸಬೇಕು ಎಂದು ಹೇಳಿದರು.

ವಿಎಸ್‌ಕೆ ವಿವಿ ಕುಲಸಚಿವ ಎಸ್.ಎನ್.ರುದ್ರೇಶ್ ಮಾತನಾಡಿ, ಸಮಾಜವು ಸರಿ ದಾರಿಯಲ್ಲಿ ಸಾಗಲು ಬುದ್ದ ಬಸವ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ಅವರ ಚಿಂತನೆಗಳನ್ನು ನಾವೆಲ್ಲ ಆಳವಡಿಸಿಕೊಳ್ಳಬೇಕು. ಸಂವಿಧಾನದ ಮೂಲಕ ಶೇಕಡ 90% ರಷ್ಟು ಜಾತಿ ವ್ಯವಸ್ಥೆ

ನಿರ್ಮೂಲನೆಯಾಗಿದೆ. ಆದರ್ಶ ವ್ಯಕ್ತಿಗಳ ಚಿಂತನೆಗಳನ್ನು ಅರಿಯಲು ವಿದ್ಯಾರ್ಥಿಗಳಿಗೆ ಭಾಷಣ ಕಾರ್ಯಕ್ರಮ ಆಯೋಜಿಸಿದೆ

ಎಂದರು.

ಸ್ಪರ್ಧೆಯಲ್ಲಿ ವಿಜೇತರಾಗುವವರಿಗೆ ಪ್ರಥಮ ಐದು ಸಾವಿರ ರೂ., ದ್ವಿತೀಯ ಮೂರು ಸಾವಿರ ರೂ., ತೃತೀಯ ಬಹುಮಾನ ಎರಡು ಸಾವಿರ ರೂ. ನಗದನ್ನು ನೀಡಲಾಗುವುದು. ವಿಶ್ವವಿದ್ಯಾಲಯದ ವ್ಯಾಪ್ತಿಯ ಸ್ನಾತಕ, ಬಿ.ಇಡಿ ಹಾಗೂ ಸ್ನಾತಕೋತ್ತರ ಕೇಂದ್ರದ ಸುಮಾರು 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net