ಟ್ರ್ಯಾಕ್ಟರ್ ಮುಗಚಿ ಓರ್ವ ನೀರುಪಾಲು, ಈಜಿ ದಡ ಸೇರಿದ 12 ಜನ!

IMG-20240609-WA0003.jpg
Published on

ಬೆಳಗಾವಿ: ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ತುಂಬಿ ಹರಿಯುತ್ತಿದ್ದ ನದಿಗೆ ಟ್ರಾಕ್ಟರ್ ಮುಗುಚಿ ಬಿದ್ದ ಪರಿಣಾಮ‌ 13 ಜನರ ಪೈಕಿ ಓರ್ವ ನೀರುಪಾಲಾಗಿ 12 ಜನ ಈಜಿ ದಡ ಸೇರಿದ ಘಟನೆ‌‌ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಟ್ರೇಲರ್​​​ ಸಮೇತ ಟ್ರಾಕ್ಟರ್ ನೀರಿಗೆ ಬಿದ್ದಿದ್ದು, ಅದೃಷ್ಟವಷಾತ್ 12 ಮಂದಿ ಈಜಿ ದಡ ಸೇರಿದ್ದಾರೆ.

13 ಜನರು ಅವರಾದಿಯಿಂದ ನಂದಗಾಂವ್ ಗೆ ಟ್ರ್ಯಾಕ್ಟರ್​ ಮೇಲೆ ಕುಳಿತುಕೊಂಡು ಕೂಲಿ ಕೆಲಸಕ್ಕೆಂದು‌ ತೆರಳುತ್ತಿದ್ದರು. ನದಿ ದಾಟುವಾಗ ಟ್ರಾಕ್ಟರ್ ಆಯತಪ್ಪಿ ಘಟಪ್ರಭಾ ನದಿಗೆ ಬಿದ್ದಿದೆ. ನೀರಲ್ಲಿ ಕಣ್ಮರೆಯಾಗಿರುವ ಓರ್ವನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಕುಲಗೋಡ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net