

ಹುಬ್ಬಳ್ಳಿ : ಹಾವೇರಿ ಮತ್ತು ಬ್ಯಾಡಗಿ ನಿಲ್ದಾಣಗಳ ಮಧ್ಯೆ ರೈಲು ಹಳಿಗಳ ನಿರ್ವಹಣೆ ಮತ್ತು ದುರಸ್ತಿ ಕಾರ್ಯ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ-ಮೈಸೂರು ವಿಶ್ವಮಾನ ದೈನಂದಿನ ಎಕ್ಸ್ಪ್ರೆಸ್ ರೈಲು ವಿವಿಧ ದಿನಗಳಂದು 105 ನಿಮಿಷಗಳ ಕಾಲ ತಡವಾಗಿ ಸಂಚರಿಸಲಿದೆ.
ಏ. 28, 29, ಮೇ 1, 2, 4, 5, 6, 8, 9, 11, 12, 13, 15 ಮತ್ತು 16ರಂದು ತಡವಾಗಿ ಸಂಚರಿಸಲಿದೆ ಎಂದು ನೈಋತ್ಯ ರೈಲ್ವೆ ವಲಯದ ಕಚೇರಿ ಪ್ರಕಟಣೆ ತಿಳಿಸಿದೆ.