ಸೆ.24ಕ್ಕೆ ಸಿರಿಗೆರೆ ಶ್ರೀಶಿವಕುಮಾರ ಸ್ವಾಮೀಜಿ ಶ್ರದ್ಧಾಂಜಲಿ

siregere
Published on

ಬೆಂಗಳೂರು: ಸಿರಿಗೆರೆ ಬೃಹನ್ಮಠದ ತರಬಾಳು ಜಗದ್ಗುರು ಶ್ರೀ ಶಿವಕುಮಾರ ಮಹಾಸ್ವಾಮಿಗಳ ಶ್ರದ್ಧಾಂಜಲಿ ಕಾರ್ಯಕ್ರಮವು ಸೆ.24ಕ್ಕೆ ಅರಮನೆ ಮೈದಾನದ ಚಾಮರ ವಜ್ರ ಸಭಾಂಗಣದಲ್ಲಿ ಬೆಳಗ್ಗೆ 10.30ಕ್ಕೆ ನಡೆಯಲಿದೆ.

ಮಾಜಿ ಸಚಿವ ಡಾ. ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸಲಿದ್ದು, ಹಿರಿಯ ನಾಯಕ ಡಾ.ಬಿ.ಎಲ್.ಶಂಕರ್, ಮೈಸೂರು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಜಿ.ಸದಾನಂದಯ್ಯ, ಗುರುವಂದನೆ ಸಲ್ಲಿಸಲಿದ್ದಾರೆ.

ಸಾದರ ಲಿಂಗಾಯತ ಸಮಾಜದ ಮುಖಂಡರಾದ ಬಿ.ಸಿ.ಪಾಟೀಲ್, ಎಸ್.ಎ.ರವೀಂದ್ರನಾಥ್, ಅಣಬೇರು ರಾಜಣ್ಣ, ವಡ್ನಾಳ್ ರಾಜಣ್ಣ, ಎಸ್. ರುದ್ರೇಗೌಡ, ಮಾಡಾಳು ವಿರೂಪಾಕ್ಷಪ್ಪ, ಕೆ.ಎಸ್.ಕಿರಣಕುಮಾರ್, ಮೋಹನ್ ಕುಮಾರ್ ಕೊಂಡಜ್ಜಿ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

ಇದೇ ವೇಳೆ 3ನೇ ಬಾರಿಗೆ ಅಖಿಲ ಭಾರತ ವೀರಶೈವ ಮಹಾಸಭೆಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಡಾ.ಶಾಮನೂರು ಶಿವಶಂಕರಪ್ಪ ಅವರಿಗೆ ಅಭಿನಂದನೆ ಸಲ್ಲಿಸಲಾಗುವುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net