ಬೋಗಾದಿ ರಸ್ತೆಯಲ್ಲಿನ ಅವೈಜ್ಞಾನಿಕ ರಸ್ತೆ ಡುಬ್ಬಕ್ಕೆ ಬಲಿ

Crime Logo
Published on

ಮೈಸೂರು: ಮಾನಸ ಗಂಗೋತ್ರಿಯ ಕುವೆಂಪು ಪ್ರತಿಮೆ ಎದುರಿನ ರಸ್ತೆ ಡುಬ್ಬದ ಬಳಿ ಬೈಕಿನಿಂದ ಬಿದ್ದು ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟಿದ್ದಾರೆ. ಮೈಸೂರು ತಾಲೂಕು ಮರಟಿ ಕ್ಯಾತನಹಳ್ಳಿ ನಿವಾಸಿ ಯಶವಂತ್(27) ಮೃತರು.

ಶನಿವಾರ ರಾತ್ರಿ 11 ಗಂಟೆ ಸಮಯದಲ್ಲಿ ನಗರದಿಂದ ಗ್ರಾಮಕ್ಕೆ ತೆರಳುತ್ತಿದ್ದಾಗ ರಸ್ತೆ ಡುಬ್ಬದಿಂದ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಕೆ.ಆರ್. ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಭಾನುವಾರ ರಾತ್ರಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net