ತಂತ್ರಜ್ಞಾನ ಬಳಕೆಯಿಂದ ಛಾಯಾಗ್ರಣಹಕ್ಕೆ ಚೈತನ್ಯ

Photographers function
Published on

ಹಾನಗಲ್ಲ: ಹಲವು ಸವಾಲುಗಳ ನಡುವೆ ಛಾಯಾಗ್ರಾಹಕರು, ವಿಡಿಯೋಗ್ರಾಫರ್​ಗಳು ವೃತ್ತಿ ಧರ್ಮದ ಜತೆಗೆ ಪ್ರವೃತ್ತಿಗೆ ಆದ್ಯತೆ ನೀಡುತ್ತಿದ್ದು, ಹೊಸ ತಂತ್ರಜ್ಞಾನ ಬಳಸಿ ಈಗ ವೃತ್ತಿಗೆ ಚೈತನ್ಯ ತಂದುಕೊಳ್ಳುವ ಅಗತ್ಯವಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಅಭಿಪ್ರಾಯಪಟ್ಟರು.

ಭಾನುವಾರ ಪಟ್ಟಣದ ಜೆಕೆ ಫಂಕ್ಷನ್ ಹಾಲ್​ನಲ್ಲಿ ತಾಲೂಕು ವೃತ್ತಿನಿರತ ಛಾಯಾಗ್ರಾಹಕರ ಮತ್ತು ವಿಡಿಯೋಗ್ರಾಫರ್ ಸಂಘ ಆಯೋಜಿಸಿದ್ದ 185ನೇ ವಿಶ್ವ ಛಾಯಾಗ್ರಾಹಕರ ದಿನಾಚರಣೆ, ಪ್ರತಿಭಾ ಪುರಸ್ಕಾರ, ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅತ್ಯಂತ ಕಷ್ಟಕರ ಸಂದರ್ಭಗಳಲ್ಲಿ ಛಾಯಾಗ್ರಹಣ ಮಾಡುವ ಮೂಲಕ ಬಹಳಷ್ಟು ತೊಂದರೆಯಿಂದ ವೃತ್ತಿ ಧರ್ಮ ಕಾಯ್ದುಕೊಳ್ಳುತ್ತಿರುವ ಛಾಯಾಗ್ರಾಹಕರು ಎಲ್ಲರ ಕಾರ್ಯಕ್ರಮಗಳಲ್ಲಿ ಆನಂದದ ಕ್ಷಣಗಳಿಗೆ ಸಾಕ್ಷಿಯಾಗುತ್ತಿದ್ದಾರೆ. ಛಾಯಾಗ್ರಾಹಕರಿಗಾಗಿ ಭವನ ನಿರ್ವಣಕ್ಕೆ ಪುರಸಭೆ ವ್ಯಾಪ್ತಿಯಲ್ಲಿ ನಿಯಮದಡಿ ನಿವೇಶನ ನೀಡಲು ಅಭ್ಯಂತರವಿಲ್ಲ. ಅಗತ್ಯವಿದ್ದಲ್ಲಿ ಶಾಸಕರ ಅನುದಾನದಲ್ಲಿ ಭವನ ನಿರ್ಮಾಣ ಮಾಡಲು 10 ಲಕ್ಷ ರೂ. ಅನುದಾನ ನೀಡಲು ಸಿದ್ಧರಿರುವುದಾಗಿ ಭರವಸೆ ನೀಡಿದರು.

ಹೋತನಹಳ್ಳಿ ಸಿದ್ಧಾರೂಢ ಮಠದ ಸದ್ಗುರು ಶಂಕರಾನಂದ ಸ್ವಾಮಿಗಳು ಮಾತನಾಡಿ, ಎಲ್ಲ ವೃತ್ತಿಯವರಿಗೂ ಒಂದು ಸಂಘಟನೆ ಬೇಕು. ಸಂಘಟಿತ ಹೋರಾಟದಿಂದ ಎಲ್ಲವನ್ನೂ ಪಡೆಯಲು ಸಾಧ್ಯ. ಛಾಯಾಗ್ರಾಹಕರು ಕಲಾತ್ಮಕ ವೃತ್ತಿ ಹಾಗೂ ಪ್ರವೃತ್ತಿಯವರು. ಕಲೆಗೆ ಯಾವಾಗಲೂ ಬೆಲೆ ಇದೆ ಎಂದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಜಶೇಖರಗೌಡ ಕಟ್ಟೆಗೌಡರ ಮಾತನಾಡಿ, ಅಸಂಘಟಿತವಾಗಿರುವ ಛಾಯಾಗ್ರಾಹಕರು ಹಾಗೂ ವಿಡಿಯೋಗ್ರಾಫರ್ ವೃತ್ತಿಯವರು ತಮ್ಮ ಬೇಡಿಕೆ ಈಡೇರಿಕೆಗಾಗಿ ಸಂಘಟಿತರಾಗಲೇಬೇಕು. ಎಲ್ಲ ಸಂದರ್ಭದಲ್ಲಿಯೂ ಸಾರ್ವಜನಿಕರ ಪರವಾಗಿ ತಮ್ಮ ನೆರವಿಗೆ ನಾವಿದ್ದೇವೆ. ಕಷ್ಟದಲ್ಲಿ ಬದುಕು ಕಟ್ಟಿಕೊಳ್ಳುತ್ತಿರುವ ಈ ವೃತ್ತಿ ಪ್ರವೃತ್ತಿಯವರಿಗೆ ಸಮಾಜದ ಬೆಂಬಲವೂ ಬೇಕು ಎಂದರು.

ತಾಲೂಕು ಫೋಟೋಗ್ರಾಫರ್ ಮತ್ತು ವಿಡಿಯೋಗ್ರಾಫರ್ ಸಂಘದ ಅಧ್ಯಕ್ಷ ಬಸವರಾಜ ಗಾಣಿಗೇರ ಅಧ್ಯಕ್ಷತೆ ವಹಿಸಿದ್ದರು. ಪುರಸಭೆ ಅಧ್ಯಕ್ಷೆ ಮಮತಾ ಆರೆಗೊಪ್ಪ, ಉಪಾಧ್ಯಕ್ಷೆ ವೀಣಾ ಗುಡಿ, ಮಾಜಿ ಅಧ್ಯಕ್ಷ ನಾಗಪ್ಪ ಸವದತ್ತಿ, ಆದಿಶಕ್ತಿ ಕೇಬಲ್ ನೆಟ್​ವರ್ಕ್ ಮಾಲೀಕ ರಾಮು ಯಳ್ಳೂರ, ರೈತ ಸಂಘದ ಅಧ್ಯಕ್ಷ ಮರಿಗೌಡ ಪಾಟೀಲ, ಜೆಡಿಎಸ್ ಅಧ್ಯಕ್ಷ ಆರ್.ಬಿ. ಪಾಟೀಲ, ಶಿವಾನಂದ ದೇಸಾಯಿ, ನಾಗೇಂದ್ರ ಬಂಕಾಪುರ, ಗೌಸಅಹಮ್ಮದ್ ಕಾಲೇನವರ, ಸಂಘದ ಹಾವೇರಿ ಜಿಲ್ಲಾ ಪದಾಧಿಕಾರಿಗಳು, ಎಲ್ಲ ತಾಲೂಕುಗಳ ಅಧ್ಯಕ್ಷರು ಪಾಲ್ಗೊಂಡಿದ್ದರು.

ಅನು ಬಂಕಾಪುರಮಠ ಪ್ರಾರ್ಥಿಸಿದರು. ಜ್ಞಾನಗಂಗಾ ಆಂಗ್ಲ ಮಾಧ್ಯಮ ಶಾಲೆಯ ಅಂಜಲಿ ಚಕ್ರಸಾಲಿ, ಅನ್ವಿತಾ ಭರತ ನಾಟ್ಯ ಪ್ರದರ್ಶಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಸುಣಗಾರ ಸ್ವಾಗತಿಸಿದರು. ಶಿವಾನಂದ ದೇಸಾಯಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀನಿವಾಸ ದೀಕ್ಷಿತ್ ಕಾರ್ಯಕ್ರಮ ನಿರೂಪಿಸಿದರು.

ಫೋಟೋ : 29-ಎಚ್​ಎನ್​ಎಲ್-1

ಹಾನಗಲ್ಲಿನಲ್ಲಿ ತಾಲೂಕು ವೃತ್ತಿನಿರತ ಛಾಯಾಗ್ರಾಹಕರ ಮತ್ತು ವಿಡಿಯೋಗ್ರಾಫರ್ ಸಂಘದ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಶಾಸಕ ಶ್ರೀನಿವಾಸ ಮಾನೆ, ಶಂಕರಾನಂದ ಸ್ವಾಮಿಗಳು, ಮಮತಾ ಆರೇಗೊಪ್ಪ, ರಾಜಶೇಖರಗೌಡ ಕಟ್ಟೆಗೌಡರ, ಬಸವರಾಜ ಗಾಣಿಗೇರ, ಮರಿಗೌಡ ಪಾಟೀಲ, ನಾಗಪ್ಪ ಸವದತ್ತಿ, ರಾಮು ಯಳ್ಳೂರ, ಶಿವಾನಂದ ದೇಸಾಯಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net