ಜಿಲ್ಲಾದ್ಯಂತ ವಾಲ್ಮೀಕಿ ಜಯಂತ್ಯುತ್ಸವ

31_10_Mdy_Valmiki Jayanthi
Published on

ಮಂಡ್ಯ: ಜಿಲ್ಲೆಯ ವಿವಿಧೆಡೆ ಶನಿವಾರ ವಾಲ್ಮೀಕಿ ಜಯಂತ್ಯುತ್ಸವವನ್ನು ಆಯೋಜಿಸಲಾಗಿತ್ತು.
ಜಿಲ್ಲಾಡಳಿತ ವತಿಯಿಂದ ಡಿಸಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಶೈಲಜಾ, ನಮ್ಮ ಸಂಸ್ಕೃತಿಗೆ ವಾಲ್ಮೀಕಿ ಅವರು ಕೊಡುಗೆ ಅಪಾರ. ಅವರ ಆದರ್ಶಗಳನ್ನು ಪ್ರತಿಯೊಬ್ಬರು ಅನುಸರಿಸಬೇಕು ಎಂದು ತಿಳಿಸಿದರು.
ಅಪರ ಪೊಲೀಸ್ ವರಿಷ್ಠಾಧಿಕಾರಿ ವಿ.ಧನಂಜಯ, ಜಂಟಿ ಕೃಷಿ ನಿರ್ದೇಶಕ ಡಾ.ಚಂದ್ರಶೇಖರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಸಿದ್ದಲಿಂಗೇಶ್, ಡಿಎಸ್‌ಎಸ್ ರಾಜ್ಯ ಸಂಚಾಲಕ ಎಂ.ಬಿ.ಶ್ರೀನಿವಾಸ್ ಇತರರಿದ್ದರು. ಇದೇ ವೇಳೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ನಾಗಮಂಗಲದ ವಿಜಿಟಮ್ ಪಬ್ಲಿಕ್ ಸ್ಕೂಲ್ನ ವಿದ್ಯಾರ್ಥಿನಿ ಅನುಷಾಗೆ 1 ಲಕ್ಷ ರೂ ಪ್ರೋತ್ಸಾಹಧನ ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net