ಪರಿಷತ್ ಚುನಾವಣೆಯಲ್ಲೂ ಗೆಲುವು ನಮ್ಮದೇ

cong pressmeet photo
ಚಿಕ್ಕಮಗಳೂರು ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ ಮಾತನಾಡಿದರು.
Published on

ಚಿಕ್ಕಮಗಳೂರು: ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ಪದವೀಧರ ಕ್ಷೇತ್ರಕ್ಕೆ ಜೂನ್. ೩ರಂದು ಚುನಾವಣೆ ನಡೆಯಲಿದ್ದು, ಮೇ ೧೬ರಂದು ಶಿಕ್ಷಕರ ಕ್ಷೇತ್ರಕ್ಕೆ ಕೆ.ಕೆ ಮಂಜುನಾಥ್ ಕುಮಾರ್ ಹಾಗೂ ಪದವೀಧರ ಕ್ಷೇತ್ರಕ್ಕೆ ಆಯನೂರು ಮಂಜುನಾಥ್ ಅವರು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ ತಿಳಿಸಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮೇ ೧೬ ರಂದು ಮೈಸೂರಿನ ಪ್ರಾದೇಶಿಕ ಆಯುಕ್ತಕ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಗಳಾಗಿ ಪಕ್ಷದ ಮುಖಂಡರುಗಳೊAದಿಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳಿಂದ ಮತದಾರರು ಅತ್ಯಂತ ಉತ್ಸುಕದಲ್ಲಿದ್ದು, ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಅತ್ಯಂತ ಯಶಸ್ವಿಯಾಗಿ ಪಕ್ಷದ ೫ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ವಿಧಾನಸಭಾ ಚುನಾವಣೆಗಿಂತಲೂ ಹೆಚ್ಚಿನ ಬಹುಮತದಲ್ಲಿ ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸಲಿz್ದೆÃವೆ ಎಂದು ಹೇಳಿದರು.
ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ೪ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಅತ್ಯಂತ ಒಗ್ಗಟ್ಟಿನಿಂದ ಕೆಲಸ ಮಾಡಿದ್ದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಗೆಲುವು ನಿಶ್ಚಿತ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.
ಲೋಕಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಎಲ್ಲ ಕ್ಷೇತ್ರಗಳಿಗಿಂತ ೧೦ ಸಾವಿರಕ್ಕೂ ಹೆಚ್ಚು ಮತಗಳು ಹೆಚ್ಚುವರಿಯಾಗಿ ಬಿದ್ದಿರುವ ವಿಶ್ವಾಸವಿದೆ. ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಯನ್ನು ಒಗ್ಗಟ್ಟು ಮತ್ತು ಯಶಸ್ಸಿನಿಂದ ಮಾಡಿದಂತೆಯೇ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಲಿz್ದÉÃವೆ ಎಂದರು.
ಕಾAಗ್ರೆಸ್ ಪಕ್ಷಕ್ಕೆ ಗ್ಯಾರಂಟಿ ಯೋಜನೆಗಳಿಂದ ಅತ್ಯಂತ ಬಲ ಬಂದಿದ್ದು, ಕಳೆದ ಎಲ್ಲ ಚುನಾವಣೆಗಳಲ್ಲಿ ಯಶಸ್ಸು ಕಾಣಲು ಇದೇ ಕಾರಣವಾಗಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರ ಮತ ಚಲಾವಣೆ ಮಾಡಿದ ಎಲ್ಲಾ ಮತದಾರರಿಗೆ, ಚುನಾವಣೆಯಲ್ಲಿ ಶ್ರಮಿಸಿದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಪಕ್ಷದ ಪರವಾಗಿ ಧನ್ಯವಾದ ಸಲ್ಲಿಸುವುದಾಗಿ ತಿಳಿಸಿದರು.
ವಿಧಾನ ಪರಿಷತ್ ಚುನಾವಣೆ ಮುಗಿದ ಬಳಿಕ ಜೂನ್.೧೫ ರಂದು ಜಿಲ್ಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶವನ್ನು ಆಯೋಜಿಸಲಾಗುವುದು ಎಂದು ಮಾಹಿತಿ ನೀಡಿದರು.
ಗ್ಯಾರಂಟಿ ಯೋಜನೆಯ ಜಿಲ್ಲಾಧ್ಯಕ್ಷ ಎಂ.ಸಿ.ಶಿವಾನAದ ಸ್ವಾಮಿ ಮಾತನಾಡಿ, ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ನಿಚ್ಛಳ ಬಹುಮತ ಬರುವ ಇಂಗಿತವನ್ನು ಕಾರ್ಯಕರ್ತರು ವ್ಯಕ್ತಪಡಿಸಿದ್ದಾರೆ. ಪಕ್ಷದ ಎಲ್ಲ ಘಟಕದ ಪದಾಧಿಕಾರಿಗಳು, ಕಾರ್ಯಕರ್ತರು ಶ್ರಮವಹಿಸಿ ಕೆಲಸ ಮಾಡಿದ್ದಾರೆ. ಕಳೆದ ಚುನಾವಣೆಯಂತೆ ಮುಂದಿನ ಜೂ. ೩ರಂದು ನಡೆಯಲಿರುವ ವಿಧಾನ ಪರುಷತ್ ಚುನಾವಣೆಯಲ್ಲೂ ಅದೇ ಹುಮ್ಮಸ್ಸಿನಿಂದ ಕೆಲಸ ಮಾಡಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಚುನಾವಣೆ ನಡೆಯಲಿರುವ ಕ್ಷೇತ್ರಗಳ ಶಾಸಕರ, ಸ್ಪರ್ಧಿಗಳ ಸಭೆ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲವು ಸಲಹೆ ಸೂಚನೆ ನೀಡಿದ್ದಾರೆ. ನಾಮಪತ್ರ ಸಲ್ಲಿಕೆಯಾದ ನಂತರ ಎಲ್ಲರೂ ಒಗ್ಗೂಡಿ ಕೆಲಸ ನಿರ್ವಹಿಸಲಿz್ದÉÃವೆ ಎಂದು ಹೇಳಿದರು.
ಸಖರಾಯಪಟ್ಟಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಡಿಮನೆ ಸತೀಶ್ ಮಾತನಾಡಿ, ವಿಧಾನಸಭೆ ಚುನಾವಣೆಯಂತೆ ಲೋಕಸಭೆ ಚುನಾವಣೆಯಲ್ಲೂ ಗ್ಯಾರಂಟಿಗಳನ್ನು ನೆನೆಪು ಮಾಡಿಕೊಂಡೇ ಮತದಾರರು ಮತ ಚಲಾಯಿಸಿದ್ದಾರೆಂದು ಭಾವಿಸುತ್ತೇನೆ. ಜಿಲ್ಲೆಯಲ್ಲಿ ನಮಗೆ ಸ್ಪಷ್ಟವಾದ ಬಹುಮತ ಬರಲಿದೆ. ವಿಧಾನಸಭೆ ಚುನಾವಣೆಗಿಂತಲೂ ಹೆಚ್ಚು ಮತಗಳ ಲೀಡ್ ಪಡೆಯಲಿz್ದÉÃವೆ ಎಂದು ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಕಾಂಗ್ರೆಸ್ ಮುಖಂಡರಾದ ತನೋಜ್ ನಾಯ್ಡು, ಹಿರೇಮಗಳೂರು ಜಗದೀಶ್, ಮುನೀರ್ ಅಹಮದ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net