ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು
Published on

ಹೊಳೆನರಸೀಪುರ: ಅಂಗಡಿ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸುತ್ತಿದ್ದವನನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಪ್ರಕರಣ ಚಿಕ್ಕಕಾಡನೂರು ಗ್ರಾಮದಲ್ಲಿ ಇತ್ತೀಚೆಗೆ ನಡೆದಿದೆ.

ಮಧ್ಯರಾತ್ರಿ ಅಂಗಡಿ ಕಳ್ಳತನ ಮಾಡಲು ಬೀಗ ಒಡೆಯುವಾಗ ಶಬ್ದ ಕೇಳಿ ಅಕ್ಕಪಕ್ಕದ ಮನೆಯವರು ಹೊರಬಂದಿದ್ದಾರೆ. ಈ ಸಂದರ್ಭ ಬೈಕ್‌ನಲ್ಲಿದ್ದ ಒಬ್ಬ ಪರಾರಿಯಾಗಿದ್ದು, ಗಿರಿ ಎಂಬುವವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ. ಹಳ್ಳಿಮೈಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net