ಹೆಬ್ಬಾವು ರಕ್ಷಿಸಿ ಕಾಡಿಗೆ ಬಿಟ್ಟ ಗ್ರಾಮಸ್ಥರು

25 KKP 1
Published on

ಕನಕಪುರ: ತಾಲೂಕಿನ ಕಸಬಾ ಹೋಬಳಿ ಅಜ್ಜೇಗೌಡನ ವಲಸೆ ಗವಿರಾಜು ರವರ ಜಮೀನಿನ ಸಮೀಪ ಬೃಹತ್ ಗಾತ್ರದ ಹೆಬ್ಬಾವೊಂದು ಪ್ರತ್ಯಕ್ಷವಾಗಿದೆ.

ಗುರುವಾರ ಆನಮಾನಹಳ್ಳಿ ಸಮೀಪದಿಂದ ತೆರಳುತ್ತಿದ್ದ ಹೆಬ್ಬಾವು ಗ್ರಾಮಸ್ಥರಿಗೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಹೌಹಾರಿದ ಗ್ರಾಮಸ್ಥರು, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸುದ್ದಿ ಮುಟ್ಟಿಸಿದ್ದಾರೆ. ಉರಗ ಪ್ರೇಮಿ ಮಳಗಾಳಿನ ಸ್ನೇಕ್ ನವೀನ್‌ನ್ನು ಕೆರೆಸಿ 10 ಅಡಿ ಉದ್ದದ ಹೆಬ್ಬಾವನ್ನು ಸಂರಕ್ಷಿಸಿದ ಅರಣ್ಯ ಅಧಿಕಾರಿಗಳು ಅದನ್ನು ಹಿಡಿದು ಬನ್ನೇರುಘಟ್ಟ ಮಿಣಿಕಲ್ ಅರಣ್ಯ ಪ್ರದೇಶಕ್ಕೆ ಬಿಟ್ಟು ಬಂದಿದ್ದಾರೆ.

ಉಪವಲಯ ಅರಣ್ಯಾಧಿಕಾರಿ ಶಿವಕುಮಾರ್, ಅರಣ್ಯ ರಕ್ಷಕ ಅಣ್ಣಯ್ಯ, ಸಿಬ್ಬಂಧಿಗಳು ಹೆಬ್ಬಾವನ್ನು ಸಂರಕ್ಷಿಸಿ ಕಾಡಿಗೆ ಬಿಡುವಲ್ಲಿ ಯಶಸ್ವಿಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net