

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಬುಧವಾರ ಬೆಳಗ್ಗೆ ಮಹಿಳೆಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಗಂಗೊಳ್ಳಿ ಗ್ರಾಮದ ಸವಿತಾ ಮೃತಪಟ್ಟ ಮಹಿಳೆ. ಅವರು ಬೆಳಗ್ಗೆ 9.45ಕ್ಕೆ ಗಂಗೊಳ್ಳಿಯ ಎಸ್.ವಿ. ಅಂಗನವಾಡಿಯಿಂದ ಮಗಳನ್ನು ವಾಪಸ್ ಕರೆದುಕೊಂಡು ಬರುತ್ತಿರುವಾಗ ಗಂಗೊಳ್ಳಿ ಗ್ರಾಮದ ಇಂಧುದರ ದೇವಸ್ಥಾನದ ಬಳಿ ಕುಸಿದು ಬಿದ್ದು ಅಸ್ವಸ್ಥರಾದರು. ಕೂಡಲೇ ಅವರನ್ನು ಗಂಗೊಳ್ಳಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಸವಿತಾ ಮೃತಪಟ್ಟಿದ್ದರು. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.