

ಹನೂರು: ತಾಲೂಕಿನ ಒಡೆಯರಪಾಳ್ಯ ಸಮೀಪದ ಬಸವನಗುಡಿ ಬಳಿ ಸೋಮವಾರ ಸಂಜೆ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಮೃಪಟ್ಟಿದ್ದಾರೆ.
ತಾಲೂಕಿನ ಪಿ.ಜಿ ಪಾಳ್ಯ ಸಮೀಪದ ಸೊಪ್ಪಿನಗುಡ್ಡೆ ಗ್ರಾಮದ ಮಹೇಶ್ ಅವರ ಪತ್ನಿ ರಂಗಿ (23) ಮೃತರು.
ಮಾಳಗನತ್ತ ಗ್ರಾಮದ ಜಮೀನೊಂದರಲ್ಲಿ ಈ ದಂಪತಿ ಕೂಲಿ ಕೆಲಸಕ್ಕೆ ಸೇರಿದ್ದು, ಅಲ್ಲಿಯೇ ವಾಸವಿದ್ದರು. ಸಂಜೆ 6 ಗಂಟೆ ಸಮಯದಲ್ಲಿ ಕಾರ್ಯನಿಮಿತ್ತ ಒಡೆಯರಪಾಳ್ಯ ಗ್ರಾಮಕ್ಕೆ ಬೈಕ್‌ನಲ್ಲಿ ತೆರಳಿ ಹಿಂದಿರುಗುತ್ತಿದ್ದರು. ಈ ವೇಳೆ ಬಸವನಗುಡಿ ಬಳಿ ಅಪಘಾತ ಸಂಭವಿಸಿ ರಂಗಿ ಮೃತಪಟ್ಟಿದ್ದಾರೆ. ಸುದ್ದಿ ತಿಳಿದ ಹನೂರು ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿದರು. ಮೃತದೇಹವನ್ನು ಹನೂರು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದ್ದು, ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.