ಪೌರ ಕಾರ್ಮಿಕರ ಕಾರ್ಯ ಅನನ್ಯ

25 TKE 4
Published on

ತರೀಕೆರೆ: ಪಟ್ಟಣದ ಸ್ವಚ್ಛತೆ ಕಾಪಾಡುವ ಪೌರ ಕಾರ್ಮಿಕರ ಕಾರ್ಯ ಅನನ್ಯ ಎಂದು ಕೆಪಿಸಿಸಿ ಸದಸ್ಯ ಜಿ.ನಟರಾಜ್ ಹೇಳಿದರು.
ಅಜ್ಜಂಪುರ ಪಟ್ಟಣ ಪಂಚಾಯಿತಿ ಆವರಣದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಯ ಪ್ರಗತಿಗೆ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿದೆ. ಪೌರ ಕಾರ್ಮಿಕರ ಸೇವೆ ಅಭಿವೃದ್ಧಿಗೆ ಪೂರಕವಾಗಿದೆ ಎಂದರು.
ಪಟ್ಟಣದ ಹೃದಯ ಭಾಗದಲ್ಲಿರುವ ಸಂತೆ ಮೈದಾನವನ್ನು ಬೇರೆಡೆಗೆ ಸ್ಥಳಾಂತರಗೊಳಿಸಿ ಅಲ್ಲಿನ 3.25ಎಕರೆ ಜಾಗದಲ್ಲಿ ಮಿನಿ ವಿಧಾನಸೌಧ ನಿರ್ಮಾಣ ಮಾಡಲು ಶಾಸಕರೊಂದಿಗೆ ಚರ್ಚಿಸಲಾಗಿದ್ದು, ಸದ್ಯದಲ್ಲೇ ಎಲ್ಲಾ ಪ್ರಕ್ರಿಯೆ ಮುಗಿದು ಆಡಳಿತ ಸೌಧ ನಿರ್ಮಾಣ ಕಾಮಗಾರಿಗೆ ಚಾಲನೆ ಸಿಗಲಿದೆ ಎಂದು ತಿಳಿಸಿದರು.
ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಎಂ.ಆರ್.ನಟರಾಜ್ ಮಾತನಾಡಿ, ಪಟ್ಟಣದ ಸ್ವಚ್ಛತೆ ಕಾಪಾಡುವ ಪೌರ ಕಾರ್ಮಿಕರು ತಮ್ಮ ಆರೋಗ್ಯದ ಕಡೆಗೂ ಕಾಳಜಿ ವಹಿಸಬೇಕು ಎಂದರು. ಕ್ರೀಡಾಕೂಟದಲ್ಲಿ ಭಾಗವಹಿಸಿ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ಪೌರ ಕಾರ್ಮಿಕರಿಗೆ ಬಹುಮಾನ ವಿತರಿಸಲಾಯಿತು. ತಹಸೀಲ್ದಾರ್ ಶಿವಶರಣಪ್ಪ ಕಟ್ಟೋಳಿ, ಪ್ರಮುಖರಾದ ಜೋಗಿ ಪ್ರಕಾಶ್, ರಾಘವೇಂದ್ರ, ತಿಪ್ಪೇಶ್, ಮುಖ್ಯಾಕಾರಿ ಟಿ.ಜಿ.ರಮೇಶ್, ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಎಸ್.ಗಿರೀಶ್, ಉಪಾಧ್ಯಕ್ಷ ಕೆ.ತಿಪ್ಪೇಶ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net