ಶಿಕ್ಷಣ, ಸಂಸ್ಕಾರ ನೀಡುವ ಕಾರ್ಯ ಒಳ್ಳೆಯದು

28Rayabag1
Published on

ರಾಯಬಾಗ: ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಒಳ್ಳೆಯ ಸಂಸ್ಕಾರ ಕಲಿತು ಪಾಲಕರು ಮತ್ತು ಗುರುಹಿರಿಯರನ್ನು ಗೌರವಿಸಬೇಕೆಂದು ಗದಗ ಬೃಹನ್ಮಠದ ಸದಾಶಿವಾನಂದ ಸ್ವಾಮೀಜಿ ಹೇಳಿದರು.

ಪಟ್ಟಣದ ಬಿ.ಎ. ಚೌಗುಲೆ ಶಿಕ್ಷಣ ಸಂಸ್ಥೆ ಕಾಲೇಜು ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಂಸ್ಥೆಯ ೧೭ನೇ ವಾರ್ಷಿಕೋತ್ಸವ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಚೌಗುಲೆ ಅವರು ತಂದೆ-ತಾಯಿ ಹೆಸರಿನಲ್ಲಿ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿ, ಬಡ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದೊಂದಿಗೆ ಒಳ್ಳೆಯ ಶಿಕ್ಷಣ ನೀಡುತ್ತಿರುವ ಕಾರ್ಯ ಶ್ಲಾಘನೀಯ ಎಂದರು.

ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಡಾ.ಗಜಾನನ ನಾಯಿಕ ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್‌ನಿಂದ ದೂರವಿದ್ದು, ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಚೌಗುಲೆ ಅವರು ಗ್ರಾಮೀಣ ವಿದ್ಯಾರ್ಥಿಗಳಿಗಾಗಿ ರಾಯಬಾಗ ಮತ್ತು ಕುಡಚಿ ಪಟ್ಟಣದಲ್ಲಿ ಸಿಬಿಎಸ್‌ಸಿ ಶಾಲೆ ಪ್ರಾರಂಭಿಸಿರುವುದು ಅವರ ಶಿಕ್ಷಣ ಪ್ರೇಮ ತಿಳಿಸುತ್ತದೆ ಎಂದರು.

ಬಿ.ಎ.ಚೌಗುಲೆ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಎಲ್.ಬಿ.ಚೌಗುಲೆ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಭಾರತಿ ಚೌಗುಲೆ, ಸಂಸ್ಥೆ ಕಾರ್ಯದರ್ಶಿ ವಿನಯ ಚೌಗುಲೆ, ನಿರ್ದೇಶಕರಾದ ಅಮರ ನಾಗರಾಳ, ಐಶ್ವರ್ಯ ಚೌಗುಲೆ, ಪ್ರಾಚಾರ್ಯರಾದ ಎಸ್.ಎಸ್.ದಿಗ್ಗೇವಾಡಿ, ಎಸ್.ಎ.ನಾಂದಣಿ, ಇಕ್ಬಾಲ್ ತಾಜೆವಾಲೆ, ಎಚ್.ಎಲ್.ಗುರವ, ಪಾರಿಸ್ ಉಗಾರೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net