ಸಂಘದ ಅಧ್ಯಕ್ಷರ ಕಾರ್ಯ ಎಲ್ಲರಿಗೂ ಮಾದರಿ

Oplus_131072
ನಂಜನಗೂಡು ತಾಲೂಕು ತಗಡೂರು ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡವನ್ನು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಉದ್ಘಾಟಿಸಿದರು. ಚಂದ್ರವತಿ ಬಸವರಾಜ್, ಟಿ.ಎನ್. ಗುರುಮಲ್ಲೇಶ್, ಜಯಪ್ರಕಾಶ್, ಗಾರ್ಡನ್ ಮಹೇಶ್ ಇತರರು ಇದ್ದರು.
Published on

ನಂಜನಗೂಡು: ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಟಿ.ಎನ್. ಗುರುಮಲ್ಲೇಶ್ ಅವರು ತಮ್ಮ 3 ಎಕರೆ 10 ಗುಂಟೆ ಜಮೀನನ್ನು 20 ಲಕ್ಷ ರೂಪಾಯಿಗಳಿಗೆ ಅಡವಿಟ್ಟು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡವನ್ನು ನಿರ್ಮಾಣ ಮಾಡಿ ಮಾದರಿಯಾಗಿದ್ದಾರೆ. ಇವರ ಕಾರ್ಯ ಎಲ್ಲರೂ ಮೆಚ್ಚುವಂತಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು.

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲೂಕಿನ ತಗಡೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು. ತಗಡೂರು ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದೇನೆ. ನಾನು ಶಾಸಕನಾಗಿದ್ದ ಸಂದರ್ಭದಲ್ಲಿ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡಕ್ಕೆ ಶಾಸಕರ ನಿಧಿಯಿಂದ 20 ಲಕ್ಷ ರೂ. ಅನುದಾನ ನೀಡಲಾಗಿತ್ತು. ನಂತರ ಸದಾನಂದ ಅವರು 10 ಲಕ್ಷ ರೂ.ಗಳನ್ನು ನೀಡಿದ್ದಾರೆ ಎಂದರು.

ತಗಡೂರು ವರುಣ ಕ್ಷೇತ್ರದಲ್ಲೇ ಅತಿ ದೊಡ್ಡ ಗ್ರಾಮವಾಗಿದ್ದು, ಸುಮಾರು ಎಂಟು ಸಾವಿರಕ್ಕೂ ಹೆಚ್ಚು ಜನರು ವಾಸ ಮಾಡುತ್ತಿದ್ದಾರೆ. ಈಗಾಗಲೇ ತಗಡೂರು ಗ್ರಾಮದ ಅಭಿವೃದ್ಧಿಗೆ 10 ಕೋಟಿ ರೂ. ಗಳನ್ನು ನೀಡಲಾಗಿದೆ. ಶುದ್ಧ ಕುಡಿಯುವ ನೀರು, ರಸ್ತೆ, ಚರಂಡಿ, ಕಚ್ಚಾ ರಸ್ತೆ ಅಭಿವೃದ್ಧಿಪಡಿಸಲು ಅನುದಾನವನ್ನು ನೀಡಲಾಗಿದ್ದು, ಸ್ಮಶಾನ ಅಭಿವೃದ್ಧಿ, ಸಮುದಾಯ ಆರೋಗ್ಯ ಕೇಂದ್ರವನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲಾಗುವುದು. ತಗಡೂರು ಗ್ರಾಮದಲ್ಲಿ ಬಸ್ ನಿಲ್ದಾಣ ಇಲ್ಲದಿರುವ ಬಗ್ಗೆ ನನ್ನ ಗಮನಕ್ಕೆ ಬಂದಿದ್ದು, ಈಗಾಗಲೇ ಸರ್ಕಾರಕ್ಕೆ ಬಸ್ ನಿಲ್ದಾಣ ನಿರ್ಮಾಣ ಮಾಡುವಂತೆ ಮನವಿ ಸಲ್ಲಿಸಿದ್ದೇವೆ. ತಗಡೂರು ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಪಣ ತೊಟ್ಟಿದ್ದೇನೆ ಎಂದು ಹೇಳಿದರು.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷ ಟಿ.ಎನ್.ಗುರುಮಲ್ಲೇಶ್ ಅವರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿ ಸನ್ಮಾನಿಸಿದರು.

ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹದೇವಪ್ಪ, ಗ್ರಾ.ಪಂ ಅಧ್ಯಕ್ಷೆ ಚಂದ್ರವತಿ ಬಸವರಾಜ್, ಉಪಾಧ್ಯಕ್ಷ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಟಿ.ಎನ್. ಗುರುಮಲ್ಲೇಶ್, ಉಪಾಧ್ಯಕ್ಷ ಜಯಪ್ರಕಾಶ್, ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಬಸವರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ, ಮುಖಂಡರಾದ ಆರ್.ಮಹದೇವ್, ಗಾರ್ಡನ್ ಮಹೇಶ್, ಶಿವರಾಂ, ಗ್ರಾಪಂ ಸದಸ್ಯರಾದ ಸಂಗೀತ, ಸರಸ್ವತಿ, ಚಿಕ್ಕಸ್ವಾಮಿ, ಅನಿತಾ, ದೇವರಾಜಮ್ಮ, ಕುಮಾರ್, ಮಣಿ, ಮಾದಶೆಟ್ಟಿ, ಕಾಂತರಾಜ್, ರವಿಶಂಕರ್, ಪಿಡಿಒ ಬಸವಣ್ಣ, ನಾಗಪ್ಪ ಪಟೇಲ್, ಶ್ರೀನಿವಾಸ ನಾಯಕ, ನಟರಾಜು, ಸುಬ್ಬಪ್ಪ, ದೇವರಾಜು, ಮುದ್ದುಮಾದೇಗೌಡ, ನಟೇಶ್, ರಂಗಶೆಟ್ಟಿ, ನಾಗಮ್ಮ, ರತ್ನಮ್ಮ, ಶಿವಲಿಂಗೇಗೌಡ, ಸುಭಿಕ್ಷ ಸೇರಿದಂತೆ ಹಲವರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net