ಸಹಕಾರಿ ಸಂಸ್ಥೆ ಕಾರ್ಯ ಶ್ಲಾಘನೀಯ

blm
Published on

ವಿಜಯವಾಣಿ ಸುದ್ದಿಜಾಲ ಶಿರ್ವ ರಕ್ತದಾನ ಇನ್ನೊಬ್ಬರ ಜೀವ ಉಳಿಸುವ ಮಹಾ ಕಾರ್ಯ ವಾಡುತ್ತದೆ. ಸುವರ್ಣ ಮಹೋತ್ಸವದ ಸಂಭ್ರಮದಲ್ಲಿರುವ ಶಿರ್ವ ಸಹಕಾರಿ ವ್ಯವಸಾಯಿಕ ಸಂ ಬೃಹತ್ ರಕ್ತದಾನ ಶಿಬಿರ ಸಂಟಿಸಿದ್ದು ಅತ್ಯಂತ ಸ್ತುತ್ಯ ಕಾರ್ಯವಾಗಿದೆ. ರಕ್ತದಾನ ಅತ್ಯಂತ ಶ್ರೇಷ್ಠ ದಾನವಾಗಿದೆ. ಸಹಕಾರಿ ಸಂಸ್ಥೆ ರಕ್ತದಾನದಂತಹ ಸವಾಜಮುಖಿ ಕಾರ್ಯ ಕೈಗೆತ್ತಿಕೊಂಡಿರುವುದು ಶ್ಲಾನೀಯ ವಿಚಾರ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಸುವರ್ಣ ಮಹೋತ್ಸವ ಸಂಭ್ರಮದಲ್ಲಿರುವ ಶಿರ್ವ ಸಹಕಾರಿ ವ್ಯವಸಾಯಿಕ ಸಂ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಸಹಯೋಗದೊಂದಿಗೆ ಮಣಿಪಾಲ ಕೆಎಂಸಿ ರಕ್ತನಿಧಿ ಸಹಕಾರದಲ್ಲಿ ಸಹಕಾರ ಭಾರತಿ ಉಡುಪಿ ಜಿಲ್ಲೆ, ಶಿರ್ವ, ಪಂಜಿವಾರು, ಎಡ್ಮೇರು, ಚಂದ್ರನಗರ, ಕುತ್ಯಾರು, ಹಾಲು ಉತ್ಪಾದಕರ ಸಹಕಾರಿ ಸಂ ಮುದರಂಗಡಿ, ಉಡುಪಿ ಅಭಯಹಸ್ತ ಚಾರಿಟೆಬಲ್ ಟ್ರಸ್ಟ್, ಶಿರ್ವ ಸಮುದಾಯ ಆರೋಗ್ಯ ಕೇಂದ್ರ ಸಹಭಾಗಿತ್ವದಲ್ಲಿ ಭಾನುವಾರ ಶಿರ್ವ ಮೋನಿಸ್ ಕಾಂಪ್ಲೆಕ್ಷ್‌ನಲ್ಲಿ ಜರುಗಿದ ಬೃಹತ್ ರಕ್ತದಾನ ಶಿಬಿರ ಉದ್ಘಾಟಿಸಿ ವಾತನಾಡಿದರು. ಜಿಲ್ಲಾ ಸಹಕಾರಿ ಯೂನಿಯನ್‌ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ, ಶಿರ್ವ ಗ್ರಾಪಂ ಅಧ್ಯಕ್ಷೆ ಸವಿತಾ ರಾಜೇಶ್, ಉಡುಪಿ ಸಹಕಾರಿ ಭಾರತಿ ಅಧ್ಯಕ್ಷ ದಿನೇಶ್ ಹೆಗ್ಡೆ, ಶಿರ್ವ ಸಹಕಾರಿ ವ್ಯವಸಾಯಿಕ ಸಂ ಅಧ್ಯಕ್ಷ ಕುತ್ಯಾರು ಪ್ರಸಾದ್ ಶೆಟ್ಟಿ ಮಾತನಾಡಿದರು. ಅಭಯಹಸ್ತ ಚಾರಿಟೆಬಲ್ ಟ್ರಸ್ಟ್ ಸತೀಶ್ ಸಾಲಿಯಾನ್, ವಿವಿಧ ಹಾಲು ಉತ್ಪಾದಕರ ಸಹಕಾರಿ ಸಂಗಳ ಅಧ್ಯಕ್ಷರಾದ ಸಚ್ಚಿದಾನಂದ ಹೆಗ್ಡೆ ಸೊರ್ಕಳ, ವಿಶ್ವನಾಥ ಪೂಜಾರಿ, ಪದ್ಮಾವತಿ ಪೂಜಾರಿ, ಪ್ರಕಾಶ್ ಶೆಟ್ಟಿ, ಸಂತೋಷ್ ಶೆಟ್ಟಿ, ದಯಾನಂದ ಪಾಟ್ಕರ್, ದೇವದಾಸ್ ಪಾಟ್ಕರ್, ವೀರೇಂದ್ರ ಪಾಟ್ಕರ್, ಸಂದ ನಿರ್ದೇಶಕರು ಉಪಸ್ಥಿತರಿದ್ದರು. ಶಿರ್ವ ಸಹಕಾರಿ ವ್ಯವಸಾಯಿಕ ಸಂ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಆಚಾರ್ಯ ನಿರೂಪಿಸಿದರು. ಪ್ರಸನ್ನಕುವಾರ್ ವಂದಿಸಿದರು. ಶಿಬಿರದಲ್ಲಿ ಒಟ್ಟು 135 ಯೂನಿಟ್ ರಕ್ತ ಸಂಗ್ರಹಿಸಲಾಯಿತು.

ರಕ್ತದಾನ ವಾಡುವ ಮೂಲಕ ಇನ್ನೊಂದು ಜೀವವನ್ನು ಉಳಿಸಿದ ಪುಣ್ಯ ಸಂಪಾದನೆಯಾಗುತ್ತದೆ. ರಕ್ತದಾನದ ಮೂಲಕ ನಾವು ಕೂಡ ಆರೋಗ್ಯವಂತ ಬದುಕು ಕಟ್ಟಿಕೊಳ್ಳಲು ಸಾಧ್ಯ. ಯಾವುದೇ ಭಯವಿಲ್ಲದೆ ರಕ್ತದಾನದಲ್ಲಿ ಪ್ರತಿಯೊಬ್ಬರು ತೊಡಗಿಕೊಳ್ಳಬೇಕಾಗಿದೆ. ಕುತ್ಯಾರು ಪ್ರಸಾದ್ ಶೆಟ್ಟಿ, ಶಿರ್ವ ಸಹಕಾರಿ ವ್ಯವಸಾಯಿಕ ಸಂ ಅಧ್ಯಕ್ಷ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net