ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

28Huk1
Published on

ಹುಕ್ಕೇರಿ: ನಾಲಾ ನೀರು ಸರಾಗವಾಗಿ ಸಾಗುವಂತೆ ಗುತ್ತಿಗೆದಾರರು ಕ್ರಮ ಕೈಗೊಳ್ಳಬೇಕು. ಕಾಮಗಾರಿ ಗುಣಮಟ್ಟದಿಂದ ಕೂಡಿರುವಂತೆ ನೋಡಿಕೊಳ್ಳಬೇಕು ಎಂದು ಶಾಸಕ ನಿಖಿಲ ಕತ್ತಿ ಹೇಳಿದರು.

ಪಟ್ಟಣದ ಹಳೆಯ ಬಸ್ ನಿಲ್ದಾಣ ಬಳಿಯ ಲೆಂಡೂರಿ ನಾಲದ ಸೇತುವೆ ಎತ್ತರಿಸುವ ೧.೧೦ ಕೋಟಿ ರೂ. ವೆಚ್ಚದ ಕಾಮಗಾರಿಗೆ ಈಚೆಗೆ ಚಾಲನೆ ನೀಡಿ ಮಾತನಾಡಿದರು. ಈ ಮೊದಲು ಅವೈಜ್ಞಾನಿಕವಾಗಿ ನಿರ್ಮಿಸಿದ ಸೇತುವೆಯಿಂದ ಈ ಭಾಗದ ಜನರ ಮನೆ ಮತ್ತು ಅಂಗಡಿಗಳಿಗೆ ನೀರು ನುಗ್ಗಿ ಹಲವಾರು ಅವಾಂತರ ಸೃಷ್ಟಿಸುತ್ತಿತ್ತು. ಅದಕ್ಕಾಗಿ ಎಸ್‌ಎಫ್ ಸಿ ವಿಶೇಷ ಅನುದಾನದಿಂದ ಸೇತುವೆ ಎತ್ತರ ಹೆಚ್ಚಿಸಲಾಗುತ್ತಿದೆ. ಪಟ್ಟಣದ ಸಮಗ್ರ ಅಭಿವೃದ್ಧಿಗಾಗಿ ಹಲವಾರು ಯೋಜನೆ ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.

ಪುರಸಭೆಗೆ ಖರೀದಿಸಿದ ನೂತನ ಟ್ರ‍್ಯಾಕ್ಟರ್, ಅಂಗವಿಕಲರಿಗೆ ಬ್ಯಾಟರಿ ಚಾಲಿತ ತ್ರಿಚಕ್ರ ವಾಹನ, ಬಡ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಿಸಿದರು. ಪಿಕಾರ್ಡ್ ಬ್ಯಾಂಕ್ ಆವರಣದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಫಲಾನುಭವಿಗಳಿಗೆ ಕಿಟ್ ವಿತರಣೆ, ಕಾರ್ಮಿಕರ ಸಂಚಾರ ಆರೋಗ್ಯ ವಾಹನಕ್ಕೆ ಚಾಲನೆ ನೀಡಿದರು.

ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರ ಸಂಘದ ಅಧ್ಯಕ್ಷ ಮಹಾವೀರ ನಿಲಜಗಿ, ನಿರ್ದೇಶಕರಾದ ಸತ್ತೆಪ್ಪ ನಾಯಿಕ, ಕಲಗೌಡ ಪಾಟೀಲ, ಪುರಸಭೆ ಅಧ್ಯಕ್ಷ ಇಮ್ರಾನ್ ಮೋಮಿನ, ಉಪಾಧ್ಯಕ್ಷೆ ಜ್ಯೋತಿ ಬಡಿಗೇರ, ಸಾಯಿ ಸಮಿತಿ ಅಧ್ಯಕ್ಷ ಮಹಾಂತೇಶ ತಳವಾರ, ಮುಖಂಡರಾದ ಮಹಾನಿಂಗ ಸನದಿ, ಗುರು ಕುಲಕರ್ಣಿ, ಶೀತಲ ಬ್ಯಾಳಿ, ಎ.ಕೆ.ಪಾಟೀಲ, ರವಿ ಪಾಟೀಲ, ರವಿ ನಾಯಿಕ, ಪಾಂಡುರಂಗ ಖೋತ, ಮಲ್ಲಪ್ಪ ಬಿಸಿರೊಟ್ಟಿ, ಮಹೇಶ ಬಡಗಾಂವಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net