

ಕೋಟ: ಕುಂದಾಪ್ರ ಭಾಷೆಗೆ ತನ್ನದೆ ಆದ ಅಸ್ತಿತ್ವ ಇದೆ. ಅದರ ಪರಂಪರೆಯನ್ನು ಮುಂದಿನ ತಲೆವಾರಿಗೆ ಕೊಂಡೊಯ್ಯುವ ಕೆಲಸ ನಾವು ವಾಡಬೇಕಿದೆ ಎಂದು ಕೋಟದ ಸಕಡ್ ಫೌಂಡೇಶನ್ ಪ್ರವರ್ತಕ ಕೋಟ ಶ್ರೀಕಾಂತ್ ಶೆಣೈ ಕರೆ ನೀಡಿದರು.
ಕೋಟ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ನಡೆಯಲಿರುವ ಆಸಾಡಿ ಒಡ್ರ್ ಕಾರ್ಯಕ್ರಮದ ಪೂರ್ವಭಾವಿ ಕ್ರೀಡಾಕೂಟ ಉದ್ಘಾಟಿಸಿ ವಾತನಾಡಿದರು.
ಕುಂದಗನ್ನಡದ ಗ್ರಾಮೀಣ ರಾಯಬಾರಿ ಎಂ.ಜಯರಾಮ್ ಶೆಟ್ಟಿ ಮಾತನಾಡಿದರು.
ಪಂಚವರ್ಣ ಮಹಿಳಾ ಮಂಡಲ ಅಧ್ಯಕ್ಷೆ ಲಲಿತಾ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ, ವಿಪ್ರ ಮಹಿಳಾ ಸಾಲಿಗ್ರಾಮ ವಲಯ ವಾಜಿ ಅಧ್ಯಕ್ಷೆ ಜ್ಞಾಹ್ನವಿ ಹೇರ್ಳೆ, ಪಂಚವರ್ಣ ಯುವಕ ಮಂಡಲ ಅಧ್ಯಕ್ಷ ಕೆ.ಮನೋಹರ್ ಪೂಜಾರಿ, ಹಂದಟ್ಟು ಮಹಿಳಾ ಬಳಗ ಅಧ್ಯಕ್ಷೆ ರತ್ನಾ ಪೂಜಾರಿ ಉಪಸ್ಥಿತರಿದ್ದರು.
ಮಹಿಳಾ ಮಂಡಲದ ಸದಸ್ಯೆ ವೀಣಾ ಪೂಜಾರಿ ಸ್ವಾಗತಿಸಿದರು. ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಪ್ರಾಸ್ತಾವಿಸಿದರು. ಸಂಚಾಲಕಿ ಸುಜಾತ ಬಾಯರಿ ನಿರೂಪಿಸಿ, ವಂದಿಸಿದರು.