

ವಿಜಯವಾಣಿ ಸುದ್ದಿಜಾಲ ಧಾರವಾಡ
ಸಮಾಜ ವಿಜ್ಞಾನಿ ಡಾ. ಪ್ರಕಾಶ ಭಟ್ ಅವರ ಕೃತಿ "ಹಳ್ಳಿಗಳನ್ನು ಕಟ್ಟುವ ಕಷ್ಟಸುಖ' ಬಿಡುಗಡೆ ಸಮಾರಂಭವನ್ನು ಮೇ 19ರಂದು ಬೆಳಗ್ಗೆ 10.30ಕ್ಕೆ ನಗರದ ಕರ್ನಾಟಕ ಕುಲಪುರೋಹಿತ ಆಲೂರ ವೆಂಕಟರಾವ್ ಸಾಂಸತಿಕ ಸಭಾಭವನದಲ್ಲಿ ಏರ್ಪಡಿಸಲಾಗಿದೆ.
ಬೆಂಗಳೂರಿನ 'ಬಹುರೂಪಿ' ಹಾಗೂ ಸೂರಶೆಟ್ಟಿಕೊಪ್ಪದ 'ಸಮೋರ್ದಯ ಮಹಾಸಂಘ' ಸಹಯೋಗದಲ್ಲಿ ಆಯೋಜಿಸಿದ ಸಮಾರಂಭದಲ್ಲಿ ಸಾಹಿತಿ ನಾಗೇಶ ಹೆಗಡೆ ಅವರು ಕೃತಿ ಕುರಿತು ಮಾತನಾಡಲಿದ್ದಾರೆ. ನಂತರದಲ್ಲಿ ಡಾ. ಪ್ರಕಾಶ ಭಟ್ ಅವರೊಂದಿಗೆ ಹಳ್ಳಿಗಳನ್ನು ಕಟ್ಟುವ ಕಷ್ಟ ಸುಖದ ಬಗ್ಗೆಯೇ ಸಂವಾದ ಜರುಗಲಿದೆ. ಹಿರಿಯ ಪತ್ರಕರ್ತ ಜಿ.ಎನ್. ಮೋಹನ, ಬುಡಕಟ್ಟು ವಿವಿ ಕುಲಪತಿ ಡಾ. ತೇಜಸ್ವಿ ಕಟ್ಟಿನಮನಿ, ಹಿರಿಯ ಸಾಹಿತಿ ಡಾ. ಬಿಳಿಗೆರೆ ಕೃಷ್ಣಮೂತಿರ್ ಸಂವಾದದಲ್ಲಿ ಭಾಗವಹಿಸಲಿದ್ದಾರೆ. ಸುನಂದಾ ಪ್ರಕಾಶ್ ಅವರು ಈ ಇಡೀ ಹಳ್ಳಿ ಕಟ್ಟುವ ಪ್ರಕ್ರಿಯೆಗೆ ಪ್ರತಿಕ್ರಿಯಿಸಲಿದ್ದಾರೆ.
ಹಳ್ಳಿಗಳನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲಿ ಹೊಸ ಕಾಣಿಕೆ ನೀಡುವ ಕೃತಿ ಇದು. ಕಲಘಟಗಿ ತಾಲೂಕಿನ ಸೂರಶೆಟ್ಟಿಕೊಪ್ಪ ಹಾಗೂ ಶಿರಸಿ ತಾಲೂಕಿನ ದಾಸನಕೊಪ್ಪದ 50 ಹಳ್ಳಿಗಳು ಹೊಸ ಬೆಳಕಿನತ್ತ ಹೆಜ್ಜೆ ಹಾಕಿದ ಕಥನ ಇದು. ಈ ಕೃತಿಯನ್ನು ಈ ಹಳ್ಳಿಯವರೇ ಬಿಡುಗಡೆ ಮಾಡುತ್ತಿರುವುದು ವಿಶೇಷ ಎಂದು ಬಹುರೂಪಿ ಸ್ಥಾಪಕ ಶ್ರೀಜಾ ವಿ.ಎನ್. ಹಾಗೂ ಸಮೋರ್ದಯ ಮಹಾಸಂಘದ ರೇಣಪ್ಪಗೌಡ ಭಾವಿಕಟ್ಟಿ ತಿಳಿಸಿದ್ದಾರೆ.