

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘವು ಕರ್ನಾಟಕ ರಾಜ್ಯೋತ್ಸವ ಕರ್ನಾಟಕ ಸಂಭ್ರಮ-50 ನಿಮಿತ್ತ ನ. 15ರಂದು ಸಂಜೆ 5.30 ಡಾ. ಪಾಟೀಲ ಪುಟ್ಟಪ್ಪ ಭವನದಲ್ಲಿ ಕಿತ್ತೂರು ಇತಿಹಾಸ ಸಂಶೋಧಕ ಲಿಂ. ದೊಡ್ಡಭಾವೆಪ್ಪ ಚನ್ನಬಸಪ್ಪ ಮೂಗಿ ಸ್ಮರಣಾರ್ಥ ದತ್ತಿ ಉದ್ಘಾಟನೆ ಮತ್ತು ದೊಡ್ಡಭಾವೆಪ್ಪ ಮೂಗಿ ಒಂದು ಐತಿಹಾಸಿಕ ದೃಷ್ಟಿ ಕೃತಿ ಬಿಡುಗಡೆ ಸಮಾರಂಭ ಏರ್ಪಡಿಸಿದೆ.
ಉದ್ಘಾಟಕರಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಆಗಮಿಸುವರು. ಶಾಸಕ ಅರವಿಂದ ಬೆಲ್ಲದ ಕೃತಿ ಬಿಡುಗಡೆ ಮಾಡುವರು. ಮಾಜಿ ಶಾಸಕ ವಿಶ್ವನಾಥ ಪಾಟೀಲ ಅತಿಥಿಯಾಗಿ ಆಗಮಿಸುವರು. ಮಹೇಶ ಚನ್ನಂಗಿ ಹಾಗೂ ಸವಿತಾ ಮೂಗಿ ಅತಿಥಿ ಉಪನ್ಯಾಸಕರಾಗಿ ಆಗಮಿಸುವರು. ಚಂದ್ರಕಾಂತ ಬೆಲ್ಲದ ಅಧ್ಯಕ್ಷತೆ ವಹಿಸುವರು. ಹಿರಿಯ ಗ್ರಂಥಾಲಯ ವಿಜ್ಞಾನಿ ಡಾ. ಎಸ್. ಆರ್. ಗುಂಜಾಳ ಉಪಸ್ಥಿತರಿರುವರು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ತಿಳಿಸಿದ್ದಾರೆ.