ಕೃತಿ ಬಿಡುಗಡೆ ನಾಳೆ

Vijayavani-Featured-Image
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಸಾಹಿತಿ ಮೇಘಾ ಹುಕ್ಕೇರಿ ಅವರ "ದಾಂಪತ್ಯ ಸಿರಿ' ಕೃತಿ ಬಿಡುಗಡೆ ಸಮಾರಂಭವನ್ನು ಜು. 26ರಂದು ಸಂಜೆ 5 ಗಂಟೆಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್​ ಸಭಾಭವನದಲ್ಲಿ ಏರ್ಪಡಿಸಲಾಗಿದೆ.
ಮೇಘರಾಜ ಪ್ರಕಾಶನ ವತಿಯಿಂದ ಏರ್ಪಡಿಸಿರುವ ಸಮಾರಂಭದಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಮತ್ತು ಲೀಲಾವತಿ ಬೆಲ್ಲದ ಕೃತಿ ಬಿಡುಗಡೆಗೊಳಿಸಲಿದ್ದು, ಸಾಹಿತಿ ಡಾ. ಶಾಂತಾ ಇಮ್ರಾಪುರ ಕೃತಿ ಕುರಿತು ಮಾತನಾಡುವರು. ಉತ್ತರ ಕರ್ನಾಟಕ ಲೇಖಕಿಯರ ಸಂಘದ ಅಧ್ಯೆಕ್ಷೆ ಡಾ. ರಾಜೇಶ್ವರಿ ಮಹೇಶ್ವರಯ್ಯ, ಎಸ್​ಡಿಎಂ ಇಂಜಿನಿಯರಿಂಗ್​ ಕಾಲೇಜಿನ ಪ್ರಾಚಾರ್ಯ ಡಾ. ರಮೇಶ ಚಕ್ರಸಾಲಿ ಅತಿಥಿಗಳಾಗಿ ಪಾಲ್ಗೊಳ್ಳುವರು. ಕನ್ನಡ ಸಾಹಿತ್ಯ ಪರಿಷತ್​ ಜಿಲ್ಲಾಧ್ಯಕ್ಷ ಡಾ. ಲಿಂಗರಾಜ ಅಂಗಡಿ ಅಧ್ಯತೆ ವಹಿಸುವರು. ಸಾಹಿತಿ ಲಲಿತಾ ಕೆರಿಮನಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net