ಕೃಷಿಕ ಸಮಾಜದ ಕಾರ್ಯಾಧ್ಯಕ್ಷ ನಿಧನ

MAHENDRANATH (2)
Published on

ಹೊಳೆಹೊನ್ನೂರು: ರಾಜ್ಯ ಕೃಷಿಕ ಸಮಾಜದ ಕಾರ್ಯಾಧ್ಯಕ್ಷ, ಹೊಳಲೂರಿನ ಎಂ.ಎಸ್.ಮಹೇಂದ್ರನಾಥ್ (66) ಅನಾರೋಗ್ಯದಿಂದ ಭಾನುವಾರ ಮುಂಜಾನೆ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಪತ್ನಿ, ಪುತ್ರಿ, ಪುತ್ರ ಇದ್ದಾರೆ. ಮೃತರ ಜಮೀನಿನಲ್ಲಿ ಅಂತ್ಯಸಂಸ್ಕಾರ ನೆರವೇರಿತು. ಮಹೇಂದ್ರನಾಥ್ ಅವರು ಶಿವಮೊಗ್ಗ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾಗಿ, ಮಾರುತಿ ಹಾಗೂ ಮಹಾತ್ಮ ವಿದ್ಯಾಸಂಸ್ಥೆಗಳಲ್ಲಿ ಹಲವು ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಶಿವಮೊಗ್ಗ ಬಸವ ಕೇಂದ್ರದ ಪೀಠದ ಶ್ರೀಗಳು, ಬಿಳಕಿಯ ರಾಚೋಟೇಶ್ವರ ಶ್ರೀಗಳು, ಸಂಸದ ಬಿ.ವೈ.ರಾಘವೇಂದ್ರ, ಎಂಎಲ್‌ಸಿ ಡಿ.ಎಸ್.ಅರುಣ್, ಶಾಸಕಿ ಶಾರದಾ ಪೂರ‌್ಯಾನಾಯ್ಕಾ, ರಾಜ್ಯ ರೈತ ಸಂಘದ ಅಧ್ಯಕ್ಷ ಎಚ್.ಆರ್.ಬಸವರಾಜಪ್ಪ, ಡಿಡಿಸಿ ಬ್ಯಾಂಕ್ ಅಧ್ಯಕ್ಷ ಎಚ್.ಎಲ್.ಷಡಕ್ಷರಿ, ಜಿಪಂ ಮಾಜಿ ಸದಸ್ಯರಾದ ಕೆ.ಇ.ಕಾಂತೇಶ್, ವೀರಭದ್ರಪ್ಪ ಪೂಜಾರ್ ಇತರ ಗಣ್ಯರು ಅಂತಿಮ ದರ್ಶನ ಪಡೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net