ಚಿಕಿತ್ಸೆಗೆ ಸ್ಪಂದಿಸದೆ ಯುವಕ ಸಾವು

Published on

ಕೆ.ಆರ್.ಸಾಗರ : ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವಕನೊಬ್ಬ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದು, ಮೃತನ ಅಂಗಾಂಗ ದಾನಕ್ಕೆ ಕುಟುಂಬಸ್ಥರು ಮುಂದಾಗಿದ್ದಾರೆ. ಹುಲಿಕರೆ ಗ್ರಾಮದ ರವಿಚಂದ್ರ(39) ಮೃತರು.

ಮೃತ ರವಿಚಂದ್ರ
ಮೃತ ರವಿಚಂದ್ರ

ಯುವಕ ಸಲೂನ್ ನಡೆಸುತ್ತಿದ್ದು, ಮೇ 24 ರಂದು ರಾತ್ರಿ ಕೆ.ಆರ್.ಸಾಗರದ ಸಂತೆಮಾಳದ ಮುಖ್ಯ ರಸ್ತೆಯಲ್ಲಿ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ನಾಯಿ ಅಡ್ಡ ಬಂದು ಅಪಘಾತಕ್ಕೀಡಾದ ಪರಿಣಾಮ ಕೆಳಗೆ ಬಿದ್ದ ರವಿಚಂದ್ರ ಗಂಭೀರವಾಗಿ ಗಾಯಗೊಂಡಿದ್ದರು. ತಲೆ ತೀವ್ರವಾಗಿ ಪೆಟ್ಟಾಗಿದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ರವಿಚಂದ್ರ ಮಂಗಳವಾರ ಮೃತಪಟ್ಟಿದ್ದು, ಅಂಗಾಂಗಗಳನ್ನು ದಾನ ನೀಡಿ ಪತ್ನಿ ರಂಜಿತಾ ಹಾಗೂ ಕುಟುಂಬಸ್ಥರು ಮಾನವೀಯತೆ ಮೆರೆದಿದ್ದಾರೆ. ಕೆ.ಆರ್.ಸಾಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ. ಅಂತ್ಯಕ್ರಿಯೆ ಸ್ವಗ್ರಾಮ ಬನ್ನೂರಿನಲ್ಲಿ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net