ಚಿಕಿತ್ಸೆ ಲಕಾರಿಯಾಗದೆ ಯುವಕ ಸಾವು

crime 11-02
Published on

ಆನೇಕಲ್: ಕಿತ್ತಗಾನಹಳ್ಳಿಯಲ್ಲಿ ಇತ್ತೀಚೆಗೆ ಅಡುಗೆ ಸಿಲಿಂಡರ್ ಸ್ಫೋಟಗೊಂಡು ಗಂಭೀರ ಗಾಯಗೊಂಡಿದ್ದ ವಿಷ್ಣು ಜಯರಾಜ್ (30)ಚಿಕಿತ್ಸೆ ಲಕಾರಿಯಾಗದೆ ಮೃತಪಟ್ಟಿದ್ದಾನೆ. ಸಿಲಿಂಡರ್ ಸ್ಫೋಟದಿಂದ ಇಡೀ ಕಟ್ಟಡಕ್ಕೆ ಹಾನಿಯಾಗಿತ್ತು. ಯುವಕರಿಬ್ಬರು ಗಾಯಗೊಂಡಿದ್ದರು. ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಪಡೆಯುತ್ತಿದ್ದ ಕೇರಳ ಮೂಲದ ವಿಷ್ಣು ಜಯರಾಜ್ ಮೃತಪಟ್ಟಿದ್ದಾನೆ. ಮತ್ತೊಬ್ಬ ಗಾಯಾಳು ತಮಿಳುನಾಡು ಮೂಲದ ಸುನಿಲ್ ಜೋಸೆಫ್ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ವಿಷ್ಣು ಜಯರಾಜ್ ಕಟ್ಟಡದ ಎರಡನೇ ಮಹಡಿಯಿಂದ ಕೆಳಗೆ ಬಿದ್ದಿದ್ದ ಶೇ.50 ದೇಹ ಸುಟ್ಟು ಹೋಗಿತ್ತು. ಸೂರ್ಯನ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net