ದುಶ್ಚಟಗಳಿಗೆ ಬಲಿಯಾಗುತ್ತಿರುವ ಯುವ ಸಮೂಹ

26 HANUR 1 A
ಹನೂರಿನಲ್ಲಿ ಆಯೋಜಿಸಿದ್ದ ಅರಿವು ಕಾರ್ಯಕ್ರಮದಲ್ಲಿ ಆಶಾಕಿರಣ ಯೋಜನೆಯಡಿ ಕಣ್ಣಿನ ನ್ಯೂನತೆಯುಳ್ಳವರಿಗೆ ಕನ್ನಡ ವಿತರಿಸಲಾಯಿತು.
Published on

ಹನೂರು: ಮಾದಕ ವಸ್ತಗಳ ಸೇವನೆ ವ್ಯಕ್ತಿಯನ್ನು ದೈಹಿಕ ಹಾಗೂ ಮಾನಸಿಕವಾಗಿ ದುರ್ಬಲಗೊಳಿಸಲಿದ್ದು, ಪ್ರತಿಯೊಬ್ಬರೂ ಇಂತಹ ದುಶ್ಚಟಗಳಿದಿಂದ ದೂರವಿರಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಕಾಶ್ ಸಲಹೆ ನೀಡಿದರು.

ಅಂತಾರಾಷ್ಟ್ರೀಯ ಮಾದಕ ವಸ್ತು ಸೇವನೆ ಮತ್ತು ಕಳ್ಳ ಸಾಗಣೆ ನಿಷೇಧ ದಿನ ಕುರಿತು ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ತಾಲೂಕು ಆರೋಗ್ಯಾಧಿಕಾರಿ ಕಚೇರಿ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಹಾಗೂ ಯುವಕರು ಮಾದಕ ವಸ್ತುಗಳ ಸೇವನೆಗೆ ಒಳಗಾಗುತ್ತಿದ್ದಾರೆ. ಇದರಿಂದ ಅನಾರೋಗ್ಯಕ್ಕೆ ತುತ್ತಾಗುವುದರ ಜತೆಗೆ ಕೆಲವರು ಪ್ರಾಣವನ್ನೇ ಕಳೆದುಕೊಳ್ಳುತ್ತಿದ್ದಾರೆ. ಪರಿಣಾಮ ಸಮಾಜದಲ್ಲಿ ಸ್ವಾಸ್ಥ್ಯ ಹದಗೆಡುತ್ತಿದೆ. ಮಾದಕ ವಸ್ತುಗಳ ಮಾರಾಟ ಹಾಗೂ ಸಾಗಣೆ ಕಾನೂನು ಬಾಹಿರ ಎಂದು ತಿಳಿದಿದ್ದರೂ ಕೆಲವರು ಈ ಕಾರ್ಯದಲ್ಲಿ ತೊಡಗಿದ್ದಾರೆ. ಇದರಿಂದ ಯುವ ಪೀಳಿಗೆ ಜೀವನ ಹಾಳಾಗುತ್ತಿದೆ. ಮಾದಕ ವಸ್ತುಗಳ ಮಾರಾಟವನ್ನು ಹತೋಟಿಗೆ ತರಲು ವಿಶ್ವದಲ್ಲೆಡೆ ಕಾನೂನು ಪ್ರಯತ್ನಗಳೂ ನಡೆಯುತ್ತಿದೆ. ಆದರೆ ಇದನ್ನು ಬುಡ ಸಮೇತ ಕಿತ್ತು ಹಾಕಲು ಸಾಧ್ಯವಾಗಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಈ ಬಗ್ಗೆ ಎಚ್ಚರ ವಹಿಸಿ ಸಮಾಜವನ್ನು ಮಾದಕ ವಸ್ತುಗಳಿಂದ ಮುಕ್ತವಾಗಿಸಬೇಕಿದೆ. ಈ ಗುರಿಯನ್ನು ಸಾಧಿಸುವ ಸಲುವಾಗಿ ವಿಶ್ವದಾದ್ಯಂತ ಈ ದಿನವನ್ನು ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ಉಚಿತವಾಗಿ ಕನ್ನಡಕ ವಿತರಣೆ: ಆಶಾಕಿರಣ ಯೋಜನೆಯಡಿ ಕಣ್ಣಿನ ತಪಾಸಣೆಗೊಳಗಾಗಿದ್ದ ಹಿರಿಯ ನಾಗರಿಕರು ಹಾಗೂ ನಿರ್ಗತಿಕರಿಗೆ ಕನ್ನಡಕವನ್ನು ಉಚಿತವಾಗಿ ವಿತರಿಸಲಾಯಿತು. ಜಿಲ್ಲಾ ತಂಬಾಕು ನಿರ್ಮೂಲನೆ ಸಲಹೆಗಾರ ಪ್ರಶಾಂತ್, ಆರೋಗ್ಯ ಇಲಾಖೆ ಅಧಿಕಾರಿಗಳಾದ ನಿಂಬೇಶ್, ಮುನಿಸ್ವಾಮಿ, ಮಂಜುನಾಥ್, ವೀರಣ್ಣ, ಶ್ರುಶೂಕಿಯರಾದ ಪಾರ್ವತಿ, ಜನಿತಾ ಮೇರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net