

ಹೊಸದುರ್ಗ: ಸಾಣೇಹಳ್ಳಿಯ ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯು ಈ ವರ್ಷದ ರಂಗಶಿಕ್ಷಣಕ್ಕೆ ಅರ್ಜಿ ಆಹ್ವಾನಿಸಿದೆ.
ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರಬೇಕು. ಪದವೀಧರರಿಗೆ ಆದ್ಯತೆ ಇರುತ್ತದೆ. ರಂಗಭೂಮಿಯಲ್ಲಿ ಆಸಕ್ತಿ ಇದ್ದು, ಸ್ವಲ್ಪಮಟ್ಟಿನ ಅನುಭವ ಇರಬೇಕು.
ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದಿದ್ದು, ಖ್ಯಾತ ರಂಗತಜ್ಞರು ಮತ್ತು ಅತಿಥಿ ಉಪನ್ಯಾಸಕರಿಂದ ತರಗತಿಗಳು ನಡೆಯುತ್ತವೆ. ಗ್ರಂಥಭಂಡಾರ ಹಾಗೂ ದೃಶ್ಯ, ಶ್ರವ್ಯ, ಪರಿಕರಗಳ ಅನುಕೂಲತೆ ಇದೆ.
ಭಾರತೀಯ ರಂಗಭೂಮಿ, ಕನ್ನಡ ಮತ್ತು ನಾಟಕ ಸಾಹಿತ್ಯ ಪರಂಪರೆ, ಪಾಶ್ಚಾತ್ಯ ರಂಗಭೂಮಿ, ಶಿಕ್ಷಣದಲ್ಲಿ ರಂಗಭೂಮಿ ಕುರಿತಾದ ಸೈದ್ಧಾಂತಿಕ, ಪ್ರಾಯೋಗಿಕ ತರಗತಿಗಳು ನಡೆಯಲಿವೆ. ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಊಟ-ವಸತಿ ವ್ಯವಸ್ಥೆ ದೊರೆಯುತ್ತದೆ.
ಆಸಕ್ತರು ಅರ್ಜಿಗಳನ್ನು ಪ್ರಾಚಾರ್ಯರು, ಶಿವಕುಮಾರ ರಂಗಪ್ರಯೋಗ ಶಾಲೆ, ಸಾಣೇಹಳ್ಳಿ-577515 ಹೊಸದುರ್ಗ ತಾಲೂಕು, ಚಿತ್ರದುರ್ಗ ಜಿಲ್ಲೆ ಈ ವಿಳಾಸ ಅಥವಾ ರಂಗಶಾಲೆಯ ವೆಬ್‌ಸೈಟ್ www.theatreschoolsanehlli.org ನಲ್ಲಿ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ, ಜೂ. 25 ರೊಳಗೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.