ಚೆಟ್ಟಳ್ಳಿಯಲ್ಲಿ ತೀರ್ಥ ವಿತರಣೆ

Theertha distribution in Chettally
Published on

ಮಡಿಕೇರಿ:

ಚೆಟ್ಟಳ್ಳಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ವತಿಯಿಂದ ೧೬ನೇ ವರ್ಷದ ತೀರ್ಥ ವಿತರಣಾ ಕಾರ್ಯಕ್ರಮ ಬುಧವಾರ ನಡೆಯಿತು. ಬೆಳಗ್ಗೆ ೧೦.೩೦ಕ್ಕೆ ಸಹಕಾರ ಸಂಘದ ಮುಂದಿರುವ ಕಾವೇರಿ ಮಾತೆಗೆ ವಿಶೇಷ ಅಲಂಕಾರದೊಂದಿಗೆ ಪೂಜೆ ಸಲ್ಲಿಸಲಾಯಿತು. ಕಳೆದ ೧೫ವರ್ಷಗಳ ಹಿಂದೆ ಚೆಟ್ಟಳ್ಳಿ ಸಹಕಾರ ಸಂಘದಲ್ಲಿ ಕಾವೇರಿ ಮಾತೆಯ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದ್ದು, ಅಂದಿನಿಂದ ಪ್ರತಿ ವರ್ಷವೂ ವಿಶೇಷ ಪೂಜಾ ಕೈಂಕರ್ಯದೊಂದಿಗೆ ಕಾವೇರಿ ತೀರ್ಥ ವಿತರಣೆ ಮಾಡಲಾಗುತಿದೆ. ಈ ವೇಳೆ ಮಾತನಾಡಿದ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ, ಕಾವೇರಿ ಮಾತೆಯ ಪ್ರತಿಮೆ ಪ್ರತಿಷ್ಠಾಪಿಸಿದಲ್ಲಿಂದ ಚೆಟ್ಟಳ್ಳಿ ಸಹಕಾರ ಸಂಘ ಅಭಿವೃದ್ಧಿಯತ್ತ ಸಾಗುತ್ತಿದೆ. ಈ ಸಂಘ ರೈತರ ಏಳಿಗೆಗೆ ಸದಾ ಸಹಕಾರಿಯಾಗಲೆಂದು ಕಾವೇರಿ ಮಾತೆಯನ್ನು ಬೇಡಿಕೊಳ್ಳುವುದಾಗಿ ಹೇಳಿದರು.

ಮಹಾಮಂಗಳಾರತಿಯ ನಂತರ ಪ್ರಸಾದ ವಿತರಣೆ ನೆರವೇರಿತು. ಈ ಸಂದರ್ಭದಲ್ಲಿ ಚೆಟ್ಟಳ್ಳಿ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರು, ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net