ಮನೆಯಿಂದ ಚಿನ್ನಾಭರಣ ಕಳವು

Published on


ಪುತ್ತೂರು: ಪಡೀಲು ವಿಜಯನಗರ ಬಡಾವಣೆಯ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಬಾಗಿಲು ಮುರಿದು ಒಳನುಗ್ಗಿದ್ದ ಕಳ್ಳರು ಸುಮಾರು ೮ ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ್ದಾರೆ.


ಕಾಂಚನ ಈಶ್ವರ ಭಟ್ ಕಾರ್ಯಕ್ರಮದ ನಿಮಿತ್ತ ಮೈಸೂರಿಗೆ ಹೋಗಿದ್ದ ಸಮಯ ಮನೆಯಲ್ಲಿ ಯಾರೂ ಇರಲಿಲ್ಲ. ಗುರುವಾರ ಬೆಳಗ್ಗೆ ಪಕ್ಕದ ಮನೆಯವರು ಮನೆಗೇಟು ಲಾಕ್ ಆಗಿಯೇ ಇದ್ದು ಮನೆಯ ಮುಂಬಾಗಿಲು ತೆರೆದಿರುವುದನ್ನು ಗಮಸಿ ಕರೆ ಮಾಡಿದಾಗ ಘಟನೆ ಬೆಳಕಿಗೆ ಬಂದಿದೆ.


ಮುಂಬಾಗಿಲನ್ನು ಮುರಿದು ಒಳ ನುಗ್ಗಿದ ಕಳ್ಳರು ಮನೆಯಲ್ಲಿದ್ದ ಚಿನ್ನಾಭರಣ ಕಳವು ಮಾಡಿದ್ದಾರೆ. ನಗದು ಹೋದ ಬಗ್ಗೆ ಪೊಲೀಸ್ ತನಿಖೆಯ ಬಳಿಕ ಪರಿಶೀಲನೆ ಮಾಡಬೇಕಷ್ಟೆ ಎಂಬುದು ಮನೆಯವರ ಅಭಿಪ್ರಾಯವಾಗಿದೆ. ಸ್ಥಳಕ್ಕೆ ಶ್ವಾನ ದಳ ಮತ್ತು ಬೆಳಚ್ಚು ತಜ್ಞರು ಬಂದು ಪರಿಶೀಲನೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net