ಅನ್ನಲಪುರಿ ದೇವಸ್ಥಾನದಲ್ಲಿ ಕಳವು

Published on

ವೈ.ಎನ್​.ಹೊಸಕೋಟೆ: ಸಿದ್ದಾಪುರ ಗ್ರಾಮದ ಸರಹದ್ದಿನಲ್ಲಿ ಆಂಧ್ರಪ್ರದೇಶದ ಗಡಿಯಲ್ಲಿರುವ ಅನ್ನಲಪುರಿ ಆಂಜನೇಯಸ್ವಾಮಿ ದೇವಾಲಯದಲ್ಲಿ ಸೋಮವಾರ ರಾತ್ರಿ ಕಳ್ಳರು ಕೈಚಳಕ ತೋರಿಸಿದ್ದು, ಹುಂಡಿ ಹಣ ದೋಚಿದ್ದಾರೆ. ಶ್ರಾವಣದಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿದ್ದು, ಮೂರು ವಾರಗಳಿಂದ ಹೆಚ್ಚಿನ ಹಣ ಸಂಗ್ರಹವಾಗಿತ್ತು. ಇದನ್ನು ಮನಗಂಡು ಈ ಕೃತ್ಯ ಎಸಗಿದ್ದಾರೆ. ಈ ಹಿಂದೆಯೂ ಸುಮಾರು 20ಕ್ಕೂ ಹೆಚ್ಚು ಬಾರಿ ದೇವಾಲಯದಲ್ಲಿ ಕಳ್ಳತನವಾಗಿದೆ. ನಂತರ ಅನ್ನಲಪುರಿ ಆಂಜನೇಯಸ್ವಾಮಿ ದೇವಾಲಯ ಪಕ್ಕದಲ್ಲೇ ಇರುವ ವೆಂಕಟರಮಣಸ್ವಾಮಿ ದೇವಾಲಯದ ಹುಂಡಿಯನ್ನು ಹೊರಗಡೆ ತೆಗೆದುಕೊಂಡು ಬಂದು ಹಣ ದೋಚಿದ್ದಾರೆ. ವೈ.ಎನ್​.ಹೊಸಕೋಟೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐದಾರು ದಿನಗಳ ಹಿಂದೆ ರಾಜ್ಯ ಹೆದ್ದಾರಿಯಲ್ಲಿರುವ ಬುಡ್ಡಾರೆಡ್ಡಿಹಳ್ಳಿ ಗ್ರಾಮದ ರಸ್ತೆ ಪಕ್ಕ ಇರುವ ನರಸಪ್ಪ ಎಂಬುವರ ಚಿಲ್ಲರೆ ಅಂಗಡಿಗೆ ರಾತ್ರಿ ಸಮಯದಲ್ಲಿ ನುಗ್ಗಿದ ಕಳ್ಳರು ಅಲ್ಲಿದ್ದ ಸುಮಾರು 40 ಸಾವಿರ ಮೌಲ್ಯದ ಸರಕು ಮತ್ತು ನಗದು ಹಣ ದೋಚಿದ್ದಾರೆ. ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net