ಬಂಡಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳ್ಳತನ

Published on

ಹನೂರು: ತಾಲೂಕಿನ ಬಂಡಳ್ಳಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶನಿವಾರ ರಾತ್ರಿ ಬಾಗಿಲ ಬೀಗವನ್ನು ಮುರಿದು ಒಳನುಗ್ಗಿರುವ ಕಳ್ಳರು ಕಂಪ್ಯೂಟರ್, ಸಿಸಿ ಕ್ಯಾಮರಾದ ಡಿವಿಆರ್, ಇನ್ನಿತರ ಪರಿಕರಗಳನ್ನು ದೋಚಿ ಪರಾರಿಯಾಗಿದ್ದಾರ


ಬೆಳಗ್ಗೆ ಆಸ್ಪತ್ರೆಗೆ ಆಗಮಿಸಿದ ಸಿಬ್ಬಂದಿ ಬಾಗಿಲು ಬೀಗ ಒಡೆದಿರುವುದು ಗಮನಿಸಿ ಒಳಗೆ ತೆರಳಿ ಪರಿಶೀಲಿಸಿದಾಗ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ ಕೊಠಡಿಯಲ್ಲಿ ಕಂಪ್ಯೂಟರ್ ಹಾಗೂ ಸಿಸಿ ಕ್ಯಾಮರಾದ ಪರಿಕರಗಳು ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದರು. ಆಸ್ಪತ್ರೆಯ ಸಿಬ್ಬಂದಿ ಮುನಿಸ್ವಾಮಿ ನೀಡಿದ ದೂರಿನ ಮೇರೆಗೆ ಹನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.


ಹನೂರು ಭಾಗದಲ್ಲಿ ಇತ್ತೀಚೆಗೆ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದೆ. ಆದರೆ ಕಳ್ಳರನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ. ಇದರಿಂದ ಆಗಾಗ್ಗೆ ಕಳ್ಳತನವಾಗುತ್ತಿದೆ. ಆದ್ದರಿಂದ ಪೊಲೀಸ್ ಅಧಿಕಾರಿಗಳು ಈ ಬಗ್ಗೆ ನಿಗಾ ವಹಿಸಿ ರಾತ್ರಿ ವೇಳೆ ಪೊಲೀಸ್ ಗಸ್ತು ಹೆಚ್ಚಿಸುವುದರ ಮೂಲಕ ಕಳ್ಳತನಕ್ಕೆ ಕಡಿವಾಣ ಹಾಕಬೇಕು. ಹಾಗೆಯೇ ತನಿಖೆ ಕೈಗೊಂಡು ಕಳ್ಳರನ್ನು ಪತ್ತೆಹಚ್ಚಿ ಬಂಧಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net